ಬೆಂಗಳೂರು: ವಿಶ್ವದಾದ್ಯಂತ ಕಳವಳ ಮೂಡಿಸಿರುವ ಕೊರೊನಾ ಹೊಸ ತಳಿ ಓಮಿಕ್ರಾನ್ ಬಗ್ಗೆ ರಾಜ್ಯದ ಜನತೆ ಎಚ್ಚರದಿಂದ ಇರಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದಾರೆ.
ಕೋವಿಡ್-19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ. ಕೊರೊನಾ ಹೊಸ ತಳಿ ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಃ ಅಬ್ಬರಿಸುತ್ತಿದೆ. ಕೇಂದ್ರ ಸರ್ಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೊನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ. ಕೊರೊನ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ. ಹೊರಗೆ ಬಂದಾಗ ಮುನ್ನೆಚ್ಚರಿಕೆ ಜೊತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ ಎಂದು ಮನವಿ ಮಾಡಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…