ಬೆಂಗಳೂರು : ಓಮಿಕ್ರಾನ್ ತಡೆಗೆ ನೈಟ್ ಕರ್ಫ್ಯೂ ಹೇರುವುದರ ಬಗ್ಗೆ ಯಾವುದೇ ಚಿಂತನೆಯನ್ನು ನಡೆಸಿಲ್ಲ. ಬದಲಿಗೆ ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಕ್ರಿಸ್‌ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸುವುದರ ಕುರಿತು ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಓಮಿಕ್ರಾನ್ ಆತಂಕದಿಂದಾಗಿ ಕ್ರಿಸ್ ಮಸ್ ಹಾಗೂ ಹೊಸವರ್ಷಕ್ಕೆ ನಿರ್ಬಂಧ ಅಗತ್ಯವಾಗಿದೆ. ಓಮಿಕ್ರಾನ್ ಬೇರೆ ಬೇರೆ ದೇಶದಲ್ಲಿ ಹೆಚ್ಚು ಹರಡುತ್ತಿದ್ದು, ಇಂದು ಬೆಂಗಳೂರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಲಹೆಯನ್ನು ಪಡೆಯಲಾಗಿದೆ. ಹೊಸವರ್ಷ ಆಚರಣೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.
ಈಗಾಗಲೇ ಸಭೆ ಸಮಾರಂಭಗಳಿಗೆ 500 ಜನರು ಸೇರಬಹುದು ಎಂದು ಹೇಳಲಾಗಿದೆ. ಆದರೆ ಕ್ರಿಸ್‌ಮಸ್ ಸಂದರ್ಭದಲ್ಲಿ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸುವವರ ಸಂಖ್ಯೆ ಹೆಚ್ಚಿರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ನಾಳೆಯೊಳಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹೊಸವರ್ಷ ಆಚರಣೆ ಸಂದರ್ಭದಲ್ಲಿ ಸ್ಟ್ರೀಟ್ ಸಂಭ್ರಮದ ಬಗ್ಗೆ ಮಾತನಾಡಿದ ಅವರು, ಸ್ಟ್ರೀಟ್ ಸಂಭ್ರಮದ ಬಗ್ಗೆ ಹೆಚ್ಚು ಭಯವಿದೆ. ಈ ಸಂದರ್ಭದಲ್ಲಿ ತಬ್ಬಿಕೊಂಡು ಮುದ್ದಾಡುವ ಸಂಭ್ರಮ ಜೋರಾಗಿರುತ್ತದೆ. ಇದರಿಂದಾಗಿ ಕೊರೊನಾ ಹೆಚ್ಚಳವಾಗುವ ಸಾಧ್ಯತೆ ಇರುತ್ತದೆ. ಸ್ಟ್ರೀಟ್ ಸಂಭ್ರಮಕ್ಕೆ ಬ್ರೇಕ್ ಹಾಕುವ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಾಗುವುದು ಎಂದರು.
ಎಂಜಿ ರೋಡ್, ಬ್ರಿಗೇಡ್ ರೋಡ್ ಸಂಭ್ರಮಕ್ಕೆ ನಿರ್ಬಂಧ ಹಾಕುವ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿಬಂಧನೆಯನ್ನು ತರುತ್ತೇವೆ. ಅದಕ್ಕೆ ಕಡಿವಾಣ ಹಾಕಬೇಕಾ ಅಥವಾ ನಿಬಂಧನೆ ಹೇರಬೇಕಾ ಎನ್ನುವುದರ ಕುರಿತು ಚರ್ಚೆ ನಡೆಸಲಾಗುವುದು. ಎಂದು ಮಾಹಿತಿ ನೀಡಿದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…