Featured

ಓಮಿಕ್ರಾನ್ ಭೀತಿ : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಜ.31 ರವರೆಗೆ ವಿಸ್ತರಣೆ – Vishwanews24

ಓಮಿಕ್ರಾನ್ ಭೀತಿ : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಜ.31ರವರೆಗೆ ವಿಸ್ತರಣೆ – Vishwanews24

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಮುಂದಿನ ವರ್ಷ ಜನವರಿ 31ರವರೆಗೆ ವಿಸ್ತರಿಸಲಾಗಿದೆ.

ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಜನವರಿ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಗುರುವಾರ ಅಧಿಸೂಚನೆ ಹೊರಡಿಸಿದೆ.

ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.

ಡಿಜಿಸಿಎ ಡಿಸೆಂಬರ್ 15 ರಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ನಿರ್ಧರಿಸಿತ್ತು. ಆದರೆ ಕೊರೋನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ನಂತರ ತನ್ನ ನಿರ್ಧಾರ ಬದಲಿಸಿದ ಡಿಜಿಸಿಎ ಮುಂದಿನ ಜನವರಿ 31ರ ವರೆಗೆ ಅಂತರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧವನ್ನು ಮುಂದುವರೆಸಿದೆ.

ಕಳೆದ ವರ್ಷ ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ‘ಏರ್ ಬಬಲ್’ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನವನ್ನು ಅನುಮತಿಸಲಾಗಿದೆ.

ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

38 minutes ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

57 minutes ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

1 hour ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

3 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

3 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

23 hours ago