Featured

ಓಮಿಕ್ರಾನ್  : ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ,  ಲಾಕ್‍ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ :ಸಿ. ಎಂ ಬೊಮ್ಮಾಯಿ – Vishwanews24

ಓಮಿಕ್ರಾನ್  : ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ,  ಲಾಕ್‍ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ :ಸಿ. ಎಂ ಬೊಮ್ಮಾಯಿ – Vishwanews24

ದಾವಣಗೆರೆ: ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದ್ದು, ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ ಕೇರಳದಿಂದ ಪ್ರತಿಯೊಬ್ಬರನ್ನ ಕೋವಿಡ್ ಟೆಸ್ಟ ಮಾಡಲಾಗುತ್ತಿದೆ. ಲಾಕ್‍ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ. ನಾವು ಈಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಬುಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ನಾವು ನಿರ್ಧಾರಕೈಗೊಳ್ಳಲು ಆಗಲ್ಲ. ಶಾಲಾ ಕಾಲೇಜ್‍ಗಳಲ್ಲಿ ಕೋವಿಡ್ ಬಗ್ಗೆ ನಿಗಾ ವಹಿಸಿ ಅಂತಾ ಹೇಳಿದ್ದೇವೆ. ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ಎಂದಿದ್ದಾರೆ.

ಸೌತ್ ಅಫ್ರಿಕಾದಿಂದ ಬಂದ ವ್ಯಕ್ತಿ ವಿಭಿನ್ನ ಸೋಂಕಿನ ಲಕ್ಷಣ ಕಂಡುಬಂದಿದೆ. ಐಸಿಎಂಆರ್‍ಗೆ ಜಿನೋಮ್ ಸಿಕ್ವೇನ್ಸ್ ಟೆಸ್ಟ್‍ಗೆ ಕಳಿಸಿದ್ದೇವೆ. ಐಸಿಎಂಆರ್ ವರದಿಗಾಗಿ ಕಾಯುತ್ತಿದ್ದೇವೆ. ಕೇರಳದಿಂದ ಬಂದವರ ಮೇಲೆ ವಿಶೇಷ ನಿಗಾವಹಿಸಲಾಗುತ್ತದೆ. ಕೇರಳದಿಂದ ಬಂದ ಎಲ್ಲರಿಗೂ ಟೆಸ್ಟ್ ಕಡ್ಡಾಯವಾಗಿದೆ. ಒಂದು ವೇಳೆ ನೆಗೆಟಿವ್ ಬಂದಿದ್ದರು ಏಳು ದಿನದ ನಂತರ ಮತ್ತೇ ಟೆಸ್ಟಿಂಗ್ ಮಾಡಬೇಕು. ದಾವಣಗೆರೆ ಸೇರಿದಂತೆ ಎಲ್ಲಾ ಶಾಲಾ ಕಾಲೇಜ್‍ಗಳಲ್ಲೂ ಕೇರಳ ವಿದ್ಯಾರ್ಥಿಗಳ ಬಗ್ಗೆ ನಿಗಾವಹಿಸಲಾಗುತ್ತದೆ ಎಂದು ತಿಳಿಸಿದ್ಧಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

7 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

8 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

8 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

9 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

9 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

9 hours ago