ಓಮಿಕ್ರಾನ್ ಹಿನ್ನೆಲೆ : ಸದ್ಯಕ್ಕೆ  ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧವಿಲ್ಲ  – Vishwanews24 

Featured, ರಾಜ್ಯ ನ್ಯೂಸ್

ಓಮಿಕ್ರಾನ್ ಹಿನ್ನೆಲೆ : ಸದ್ಯಕ್ಕೆ  ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧವಿಲ್ಲ  – Vishwanews24 

ಹುಬ್ಬಳ್ಳಿ: ಒಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಸದ್ಯಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದೇನೆ. ಶಿಗ್ಗಾಂವ ಕ್ಷೇತ್ರದಲ್ಲಿ ಮತದಾನ ಮಾಡಲಿರುವೆ. ಮುಂದೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಹಾಗಾಗಿ ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನ ಮಾಡುತ್ತೇವೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಅನ್ನೋ ಆಪ್ಯ್ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದರು.

ಓಮಿಕ್ರಾನ್ ಭೀತಿ : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಜ.31 ರವರೆಗೆ ವಿಸ್ತರಣೆ – Vishwanews24