Featured

ಓಲಾ  ಊಬರ್‌  ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ : ಹೈಕೋರ್ಟ್‌  ಮಧ್ಯಂತರ ಆದೇಶ – Vishwanews24

ಓಲಾ  ಊಬರ್‌  ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ : ಹೈಕೋರ್ಟ್‌  ಮಧ್ಯಂತರ ಆದೇಶ

ನವೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಓಲಾ  ಊಬರ್‌  ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌  ಮಧ್ಯಂತರ ಆದೇಶ ಮಾಡಿದೆ.

ಓಲಾ, ಊಬರ್‌ ಸೇವೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನಿನ್ನೆ ನಡೆದ ಸಭೆ ಕುರಿತು ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಓಲಾ ಹಾಗೂ ಊಬರ್‌ ಓಡಿಸದಂತೆ ಸಾರಿಗೆ ಇಲಾಖೆ ಕೈಗೊಂಡಿದ್ದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಆಟೋಗೆ ಮಾತ್ರ ಅನುಮತಿ ಕೇಳುತ್ತಿದ್ದೀರಿ ಅಲ್ವಾ? ಕೇಂದ್ರ ಸರ್ಕಾರದ ನಿಯಮಾವಳಿ ಇದೆ. ಈ ನಿಯಮಾವಳಿ ಬಗ್ಗೆ ನಿನ್ನೆ ಯಾಕೆ ಹೇಳಿಲ್ಲ? ಸಭೆಯ ತೀರ್ಮಾನ ಏನು ಎಂದು ಪೀಠ ಪ್ರಶ್ನಿಸಿತು. ಕೆಲವೊಂದು ವಿಚಾರ ಪ್ರಸ್ತಾಪಕ್ಕೆ ಕಾಲಾವಕಾಶ ನೀಡುವಂತೆ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಮನವಿ ಮಾಡಿದರು. 12 ದಿನ ಕಾಲಾವಕಾಶ ಕಲ್ಪಿಸುವಂತೆ ಕೋರಿದರು. ಇದಕ್ಕೆ ಸಮ್ಮತಿಸಿದ ಪೀಠ, ಅಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳುವ ಹಾಗೇ ಇಲ್ಲ ಎಂದು ತಿಳಿಸಿತು.

ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಖಂಡನೀಯ, ಆರೋಪಿಗಳನ್ನು ತಕ್ಷಣ ಬಂಧಿಸಿ..:ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ..

ಸಾರಿಗೆ ಇಲಾಖೆ ಕ್ರಮವನ್ನು ಪ್ರಶ್ನಿಸಿದ ಪೀಠ, ಸರ್ಕಾರ ಯಾವುದೇ ಬಲವಂತದ ಕ್ರಮಕೈಗೊಳ್ಳುವಂತೆ ಇಲ್ಲ. ಓಲಾ, ಊಬರ್ ಕಂಪನಿ ಅನುಕೂಲಕರ ದರವನ್ನು ವಿಧಿಸಬೇಕು. ಪರವಾನಗಿ ಕಾಲಾವಕಾಶ ವಿಸ್ತರಿಸಬೇಕು ಎಂದು ಆದೇಶ ಹೊರಡಿಸಿತು.

2021ರಲ್ಲಿ ಸಾರಿಗೆ ಇಲಾಖೆ ನಿಗದಿಪಡಿಸಿದ ದರವನ್ನು ಪಾಲಿಸಬೇಕು. ಹೆಚ್ಚುವರಿ ಸೇವೆಯ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು. 10 ರಿಂದ 15 ದಿನದ ಒಳಗೆ ಸರ್ಕಾರ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ ನ್ಯಾಯಾಲಯ, ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago