ಬೆಂಗಳೂರು: ಓಲಾ ಊಬರ್ ಓಡಿಸಬಾರದು ಎಂದು ಸರ್ಕಾರ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ಓಲಾ, ಊಬರ್ ಸೇವೆಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನಿನ್ನೆ ನಡೆದ ಸಭೆ ಕುರಿತು ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಓಲಾ ಹಾಗೂ ಊಬರ್ ಓಡಿಸದಂತೆ ಸಾರಿಗೆ ಇಲಾಖೆ ಕೈಗೊಂಡಿದ್ದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಆಟೋಗೆ ಮಾತ್ರ ಅನುಮತಿ ಕೇಳುತ್ತಿದ್ದೀರಿ ಅಲ್ವಾ? ಕೇಂದ್ರ ಸರ್ಕಾರದ ನಿಯಮಾವಳಿ ಇದೆ. ಈ ನಿಯಮಾವಳಿ ಬಗ್ಗೆ ನಿನ್ನೆ ಯಾಕೆ ಹೇಳಿಲ್ಲ? ಸಭೆಯ ತೀರ್ಮಾನ ಏನು ಎಂದು ಪೀಠ ಪ್ರಶ್ನಿಸಿತು. ಕೆಲವೊಂದು ವಿಚಾರ ಪ್ರಸ್ತಾಪಕ್ಕೆ ಕಾಲಾವಕಾಶ ನೀಡುವಂತೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮನವಿ ಮಾಡಿದರು. 12 ದಿನ ಕಾಲಾವಕಾಶ ಕಲ್ಪಿಸುವಂತೆ ಕೋರಿದರು. ಇದಕ್ಕೆ ಸಮ್ಮತಿಸಿದ ಪೀಠ, ಅಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳುವ ಹಾಗೇ ಇಲ್ಲ ಎಂದು ತಿಳಿಸಿತು.
ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಖಂಡನೀಯ, ಆರೋಪಿಗಳನ್ನು ತಕ್ಷಣ ಬಂಧಿಸಿ..:ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ..
ಸಾರಿಗೆ ಇಲಾಖೆ ಕ್ರಮವನ್ನು ಪ್ರಶ್ನಿಸಿದ ಪೀಠ, ಸರ್ಕಾರ ಯಾವುದೇ ಬಲವಂತದ ಕ್ರಮಕೈಗೊಳ್ಳುವಂತೆ ಇಲ್ಲ. ಓಲಾ, ಊಬರ್ ಕಂಪನಿ ಅನುಕೂಲಕರ ದರವನ್ನು ವಿಧಿಸಬೇಕು. ಪರವಾನಗಿ ಕಾಲಾವಕಾಶ ವಿಸ್ತರಿಸಬೇಕು ಎಂದು ಆದೇಶ ಹೊರಡಿಸಿತು.
2021ರಲ್ಲಿ ಸಾರಿಗೆ ಇಲಾಖೆ ನಿಗದಿಪಡಿಸಿದ ದರವನ್ನು ಪಾಲಿಸಬೇಕು. ಹೆಚ್ಚುವರಿ ಸೇವೆಯ ಚಾರ್ಜ್ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು. 10 ರಿಂದ 15 ದಿನದ ಒಳಗೆ ಸರ್ಕಾರ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ ನ್ಯಾಯಾಲಯ, ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…