ಮುಂಬೈ: ಬೃಹತ್ ಮುಂಬಯಿ ಮಹಾನಗರಪಾಲಿ ಮುಂಬೈನ ಬಂಗಲೆಯೊಂದರಲ್ಲಿ ನಟಿ ಕಂಗನಾ ರನೌತ್ ಅವರ ಕಚೇರಿಯನ್ನು ನೆಲಸಮಗೊಳಿಸುವುದು ‘ಕಾನೂನಿನ ದುರುದ್ದೇಶವಲ್ಲದೆ ಮತ್ತೇನಲ್ಲ’ ಎಂದು ಬಾಂಬೆ ಹೈಕೋರ್ಟ್ ಇಂದು ಹೇಳಿದೆ.
ಕಂಗನಾ ಬಂಗಲೆ ಧ್ವಂಸ ಪ್ರಕರಣದ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಶುಕ್ರವಾರ, ಇದೊಂದು ದ್ವೇಷದ ನಡವಳಿಕೆಯೇ ಹೊರತು, ಕಾನೂನು ಸಮ್ಮತವಾದುದಲ್ಲ ಎಂದು ತಿಳಿಸಿದೆ.
ಸೆಪ್ಟೆಂಬರ್ 9 ರಂದು ಮುಂಬೈನ ಪಾಲಿ ಹಿಲ್ ಬಂಗಲೆಯೊಂದರಲ್ಲಿ ಕಂಗನಾ ರನೌತ್ ಅವರ ಕಚೇರಿ, ನಿವಾಸ ಒಂದು ಭಾಗವನ್ನು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಥವಾ ಬಿಎಂಸಿ ನೆಲಸಮ ಮಾಡಿತ್ತು. ಮಹಾರಾಷ್ಟ್ರ ಸರ್ಕಾರ ಮತ್ತು ಆಡಳಿತಾರೂಢ ಶಿವಸೇನಾ ವಿರುದ್ಧ ಅವರು ಮಾಡಿದ ಟೀಕೆಗಳ ಪರಿಣಾಮವಾಗಿ ನಾಗರಿಕ ಸಂಸ್ಥೆ ತನ್ನ ವಿರುದ್ಧದ ಕ್ರಮ ಎಂದು ಆರೋಪಿಸಿ ಕಂಗನಾ ಕೋರ್ಟ್ ಮೆಟ್ಟಿಲೇರಿದ್ದರು.
ನಟಿ ಕಂಗನಾ ರಣಾವತ್ ಅವರು ಅಕ್ರಮವಾಗಿ ಮನೆ ಕಟ್ಟಿರುವುದಾಗಿ ಬಿಎಂಸಿ ಆರೋಪಿಸಿತ್ತು. ಕಂಗನಾ ಅವರು ಸುಮಾರು 14 ನಿಯಮವನ್ನು ಉಲ್ಲಂಘಿಸಿರುವುದಾಗಿ ಬಿಎಂಸಿ ಪಟ್ಟಿ ಮಾಡಿತ್ತು.
ಯಾವುದೇ ನಾಗರಿಕರ ವಿರುದ್ಧ ಬಲ ಪ್ರಯೋಗವನ್ನು ಅಧಿಕಾರಿಗಳು ಅನುಮೋದಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ ಕಂಗನಾ ರಾಜ್ಯದಿಂದ ಹೊರಗಿದ್ದ ವೇಳೆ, ಕೇವಲ 24ಗಂಟೆಗಳ ಕಾಲಾವಧಿಯಲ್ಲಿ ಉತ್ತರ ನೀಡುವಂತೆ ಬಿಎಂಸಿ ಸೂಚಿಸಿತ್ತ. ಆದರೆ ಆಕೆಯ ಮನವಿಯನ್ನು ಪುರಸ್ಕರಿಸಿ ಹೆಚ್ಚಿನ ಸಮಯವನ್ನು ನೀಡದಿರುವುದನ್ನು ನ್ಯಾಯಾಲಯ ಗಮನಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…