ದೀಪಾವಳಿಯ ಪ್ರಯುಕ್ತ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ,ಗೋಸಾಕುವ ಕುಟುಂಬಕ್ಕೆ ಗೌರವಾರ್ಪಣೆ ಕಾರ್ಯಕ್ರಮ ದಿನಾಂಕ 26.10.2022 ಬುಧವಾರ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಭಾಜಪ ಉಪಾಧ್ಯಕ್ಷ ಶ್ರೀಪ್ರಕಾಶ್ ಶೆಟ್ಟಿಯವರು ಭಾರತಮಾತೆ ಪೂಜೆ ನಡೆಸಿ ಚಾಲನೆ ನೀಡಿದರು. ಮಾತೆಯರಿಂದ ಗೋಪೂಜೆ ನಡೆಸಿ ಪ್ರತಿ ಗೋಸಾಕುವ ಕುಟುಂಬಕ್ಕೆ ಗೌರವಪೂರ್ವಕವಾಗಿ ಸನ್ಮಾನಿಸಿ, ಗೋಆಹಾರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಭಾಜಪ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್,ಉಡುಪಿ ಜಿಲ್ಲಾ ಭಾಜಪ ಉಪಾಧ್ಯಕ್ಷೆ ಶ್ರೀಮತಿ ಗೀತಾಂಜಲಿ ಸುವರ್ಣ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಶ್ರೀಮಿಥುನ್.ಆರ್.ಹೆಗ್ಡೆ,ಕಾಪು ಮಂಡಲ ವಿಹಿಂಪ ಮುಖಂಡರಾದ ಶ್ರೀರಾಜೇಂದ್ರ ಶೆಣೈ, ಹಿಂದು ಜಾಗರಣಾ ವೇದಿಕೆ ಮುಖಂಡ ಶ್ರೀಪ್ರತೀಕ್ ಕೋಟ್ಯಾನ್,ಹಿಂದೂ ಮುಖಂಡರಾದ ಶ್ರೀಸಂದೇಶ್ ಶೆಟ್ಟಿ, ಶ್ರೀಸುಹಾಸ್ ಶೆಟ್ಟಿ ನಟವರ್ಯ, ಶ್ರೀಲೊಕೇಶ್ ಪಲಿಮಾರು, ಶ್ರೀಮೋಹನ್ ಪಣಿಯೂರು, ಶ್ರೀಸುಬ್ಬ ಕಂಚಿನಡ್ಕ, ಶ್ರೀಮೊನಪ್ಪ, ಶ್ರೀಸುಂದರ್,ಶ್ರೀಮತಿ ಸುಗುಣಾ, ಶ್ರೀಮತಿ ಶಾಂತ, ಶ್ರೀಚಿಕ್ಕ್ಯಕ್ಕ ಮೊದಲಾದವರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…