ಅಲ್ಲೂರು: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ.
ಈ ಅಪಘಾತವು ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿರುವುದು ಕಂಡುಬಂದಿದೆ.
“ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. 9 ಮಂದಿ ಸಾವನ್ನಪ್ಪಿದ್ದಾರೆ, 7 ಮಂದಿಯನ್ನು ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ಸಿಹೆಚ್‌ಸಿ ಚಿಂತೂರಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತೀಕ್ಷ್ಣವಾದ ತಿರುವಿನಲ್ಲಿ ಸಾಗುವಾಗ ವಾಹನವು ರಸ್ತೆಯಿಂದ ಪಕ್ಕಕ್ಕೆ ಉರುಳಿ ಕಡಿದಾದ ಇಳಿಜಾರಿನ ಕೆಳಗೆ ಬಿದ್ದಿದೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿ, ಗಾಯಾಳುಗಳಿಗೆ ನೀಡಲಾಗುವ ಪರಿಹಾರದ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದರು. ಹಿರಿಯ ಅಧಿಕಾರಿಗಳು ತಕ್ಷಣ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಅವರು ಆದೇಶಿಸಿದರು ಮತ್ತು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಲು ಮತ್ತು ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…