ಉಡುಪಿ : ಸಾರ್ವಜನಿಕರಿಗೆ ಕಂದಾಯ ಇಲಾಖೆವತಿಯಿಂದ ನೀಡಲಾಗುತ್ತಿರುವ ಮೂಲ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮವು ಶನಿವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್,ಹಿಸ್ಸಾ ಸ್ಕೆಚ್,ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣಪತ್ರಗಳನ್ನು ,ಈಗಾಗಲೇ ಪ್ರೂಟ್ಸ್ ತಂತ್ರಾoಶದಲ್ಲಿ ನೊಂದಣಿಯಾಗಿರುವ ರೈತರ ಮನೆ ಮನೆಗೆ ಭೇಟಿ, ಉಚಿತವಾಗಿ ವಿತರಿಸಲಾಗುವುದು. ಇದಕ್ಕಾಗಿ ಜಿಲ್ಲೆಯ 1,73,979 ರೈತರಿಗೆ ಸಂಬoದಿಸಿದ , 6,61,979 ಪಹಣಿಗಳು, 13,10,481 ಜಾತಿ ಪ್ರಮಾಣ ಪತ್ರ, 8,01,851 ಆದಾಯ ಪ್ರಮಾಣ ಪತ್ರಗಳು ಮತ್ತು 4,62,861 ಅಟ್ಲಾಸ್ ಗಳನ್ನು ವಿತರಿಸಲು ಗುರಿ ಹೊಂದಲಾಗಿದ್ದು, ಈಗಾಗಲೇ 3,79,824 ಪಹಣಿ, 2,13,081 ಜಾತಿ ಮತ್ತು ಆದಾಯ ಪ್ರಮಾಣ ಪತ್ರ 25,081 ಅಟ್ಲಾಸ್ ಗಳನ್ನು ಮುದ್ರಣ ಮಾಡಿ ವಿತರಿಸಲು ಸಿದ್ದಪಡಿಸಿಕೊಳ್ಳಲಾಗಿದ್ದು, ಈ ಎಲ್ಲಾ ದಾಖಲಾತಿಗಳನ್ನು ಕುಟುಂಬವಾರು ಜೋಡಿಸಿ, ಕಂದಾಯ ಇಲಾಖೆ ಸಿಬ್ಬಂದಿಗಳ ಮೂಲಕ ಜಿಲ್ಲೆಯ 267 ಕಂದಾಯ ಗ್ರಾಮಗಳ ರೈತರ ಮನೆ ಬಾಗಿಲಿಗೆ ವಿತರಿಸಲಾಗುವುದು ಎಂದರು.
ಒಂದು ವೇಳೆ ದಾಖಲೆಗಳು ಮುದ್ರಣವಾಗದೇ , ರೈತರಿಗೆ ಮುದ್ದಾಂ ವಿತರಿಸಲು ಸಾಧ್ಯವಾಗದೇ ಇದ್ದಲ್ಲಿ , ಅಂತಹ ರೈತರಿಗೆ ಮಾರ್ಚ್ 21 ರಿಂದ 26 ರ ವರೆಗೆ ವಿಶೇಷ ಅಭಿಯಾನದ ಮೂಲಕ , ಜಿಲ್ಲೆಯ ತಾಲೂಕು ಕಚೇರಿ, ನಾಡ ಕಚೇರಿ, ಗ್ರಾಮ ಲೆಕ್ಕಾದಿಕಾರಿಗಳ ಕಚೇರಿಯಲ್ಲಿ ಉಚಿತವಾಗಿ ವಿತರಿಸಲಾಗುವುದು, ದಾಖಲೆಗಳನ್ನು ಪಡೆದ ರೈತರು ಗ್ರಾಮ ಕರಣಿಕರ ಬಳಿ ಇರುವ ಸ್ವೀಕೃತಿಯಲ್ಲಿ ದಾಖಲೆ ಪಡೆದ ಬಗ್ಗೆ ದೂರವಾಣಿ ಸಂಖ್ಯೆಯೊoದಿಗೆ ಸಹಿ ನಮೂದಿಸುವಂತೆ ತಿಳಿಸಿದರು.
ಮಾರ್ಚ್ 12 ರಂದು ಉಡುಪಿ ತಾಲೂಕಿನ ತೆಂಕನಿಡಿಯೂರು, ಕಾಪು ವಿನ ಉಳಿಯಾರುಗೋಳಿ, ಬ್ರಹ್ಮಾವರದ ಚೇರ್ಕಾಡಿ, ಕಾರ್ಕಳದ ಕುಕ್ಕಂದೂರು, ಹೆಬ್ರಿಯ ಹೆಬ್ರಿ, ಕುಂದಾಪುರದ ಕರ್ಕುಂಜೆ, ಬೈಂದೂರು ನ ಕಾಲ್ತೋಡು ನಲ್ಲಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ ಎಂದರು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…