ಬೆಂಗಳೂರು: ಬಿಡದಿ ಬಳಿಯ ಈಗಲ್ಟೌನ್ ರೆಸಾರ್ಟ್ನಲ್ಲಿ ನಡೆದಿದ್ದ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಕಂಪ್ಲಿಯ ಕಾಂಗ್ರೆಸ್ ಶಾಸಕ ಜೆ.ಎನ್. ಗಣೇಶ್ ಅವರನ್ನು ಗುಜರಾತ್ನಲ್ಲಿ ಬಂಧಿಸಲಾಗಿದೆ.
ಆನಂದ್ ಸಿಂಗ್ ಮೇಲೆ ತೀವ್ರ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಗಣೇಶ್ ಘಟನೆ ನಡೆದ ನಂತರ ತಲೆಮರೆಸಿಕೊಂಡಿದ್ದರು. ಗಣೇಶ್ರನ್ನು ಬಂಧಿಸಲು ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ್ದರು. ಈಗ ಹಲ್ಲೆ ನಡೆದು ಬರೋಬ್ಬರಿ 1 ತಿಂಗಳ ಬಳಿಕ ಪೊಲೀಸರು ಗಣೇಶ್ ಅವರನ್ನು ಬಂಧಿಸಿದ್ದಾರೆ.
ಈ ನಡುವೆ ಗಣೇಶ್ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸ್ವೀಕರಿಸಿದ ನ್ಯಾಯಾಲಯ ಫೆ. 25 ಕ್ಕೆ ವಿಚಾರಣೆ ನಿಗದಿಪಡಿಸಿತ್ತು. ಆದರೆ ಮಂಗಳವಾರ ಗಣೇಶ್ ಪರ ವಕೀಲರು ಜಾಮೀನು ಅರ್ಜಿ ವಾಪಸ್ ಪಡೆದಿದ್ದರು ಎಂದು ತಿಳಿದು ಬಂದಿತ್ತು.
ಜನವರಿ 20ರಂದು ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಅವರ ಮೇಲೆ ಅದೇ ಪಕ್ಷದ ಶಾಸಕ ಕಂಪ್ಲಿ ಗಣೇಶ್ ಹಲ್ಲೆ ನಡೆದಿದ್ದರು. ಪರಿಣಾಮ ಆನಂದ್ ಸಿಂಗ್ ಅವರ ಕಣ್ಣು, ಮುಖ, ತಲೆ ಹಾಗೂ ಕಿಬ್ಬೊಟ್ಟೆಗೆ ಗಾಯಗಳಾಗಿತ್ತು. ಅವರು ಬಳಿಕ ಶೇಷಾದ್ರಿಪುರ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.ಹಲ್ಲೆ ನಡೆಸಿದ್ದ ಗಣೇಶ್ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…