ಬೆಂಗಳೂರು: ಕಂಪ್ಲಿ ಶಾಸಕ ಜಿಎನ್ ಗಣೇಶ್ಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯಪುರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ಫೆ.21 ರಿಂದ ಜೈಲು ವಾಸದಲ್ಲಿದ್ದ ಕಂಪ್ಲಿ ಗಣೇಶ್ಗೆ ಹೈಕೋರ್ಟ್ ಏಕ ಸದಸ್ಯ ಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಸಾಕ್ಷ್ಯ ನಾಶ ಮಾಡದಂತೆ ಹಾಗೂ ಇಂತಹ ಮರುಕಳಿಸದಂತೆ ಎಚ್ಚರಿಕೆ ನೀಡಿರುವ ಹೈಕೋರ್ಟ್ ನ ಏಕ ಸದಸ್ಯ ಪೀಠ 2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಲಾಗಿದೆ.
ಗಣೇಶ್ ಪರ ಜಾಮೀನು ನೀಡುವಂತೆ ವಾದ ಮಂಡಿಸಿದ ವಕೀಲ ಬಿ.ವಿ.ಆಚಾರ್ಯ, ಈ ಘಟನೆ ಪೂರ್ವನಿಯೋಜಿತವಲ್ಲ. ಮೊದಲು ಆನಂದ್ ಸಿಂಗ್ ಅವರೇ ಹಲ್ಲೆ ನಡೆಸಿದ್ದರು ಇದಕ್ಕೆ ಪ್ರತಿಯಾಗಿ ಆತ್ಮರಕ್ಷಣೆಗಾಗಿ ಗಣೇಶ್ ಪ್ರತಿದಾಳಿ ನಡೆಸಿದ್ದಾರೆ. ಇನ್ನು ಘಟನೆಗೆ ಸಚಿವರು, ಶಾಸಕರೇ ಸಾಕ್ಷಿಗಳಾಗಿರುವ ಕಾರಣ ಅವರ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಈ ಆಧಾರದ ಮೇಲೆ ಕಂಪ್ಲಿ ಗಣೇಶ್ಗೆ ಜಾಮೀನು ನೀಡಬೇಕಾಗಿದೆ ಅಂತಾ ಬಿ.ವಿ.ಆಚಾರ್ಯ ಮನವಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿಆರೋಪಿ ಹೊರ ಬಂದರೆ ಆನಂದ್ ಸಿಂಗ್ ಜೀವ ಅಪಾಯವಿದೆ ಎಂದು ವಾದಿಸಿದ್ದರು. ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…