Featured

ಕಂಪ್ಲಿ ಶಾಸಕ ಗಣೇಶ್​ಗೆ ಷರತ್ತುಬದ್ಧ ಜಾಮೀನು ಮಂಜೂರು – Vishwanews24

ಬೆಂಗಳೂರು: ಕಂಪ್ಲಿ ಶಾಸಕ ಜಿಎನ್​ ಗಣೇಶ್​ಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯಪುರ ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿ ಫೆ.21 ರಿಂದ ಜೈಲು ವಾಸದಲ್ಲಿದ್ದ ಕಂಪ್ಲಿ ಗಣೇಶ್​ಗೆ ಹೈಕೋರ್ಟ್​ ಏಕ ಸದಸ್ಯ ಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಸಾಕ್ಷ್ಯ ನಾಶ ಮಾಡದಂತೆ ಹಾಗೂ ಇಂತಹ ಮರುಕಳಿಸದಂತೆ ಎಚ್ಚರಿಕೆ ನೀಡಿರುವ ಹೈಕೋರ್ಟ್ ನ ಏಕ ಸದಸ್ಯ ಪೀಠ 2 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಲಾಗಿದೆ.

ಗಣೇಶ್ ಪರ ಜಾಮೀನು ನೀಡುವಂತೆ ವಾದ ಮಂಡಿಸಿದ ವಕೀಲ ಬಿ.ವಿ.ಆಚಾರ್ಯ, ಈ ಘಟನೆ ಪೂರ್ವನಿಯೋಜಿತವಲ್ಲ. ಮೊದಲು ಆನಂದ್ ಸಿಂಗ್​ ಅವರೇ ಹಲ್ಲೆ ನಡೆಸಿದ್ದರು ಇದಕ್ಕೆ ಪ್ರತಿಯಾಗಿ ಆತ್ಮರಕ್ಷಣೆಗಾಗಿ ಗಣೇಶ್ ಪ್ರತಿದಾಳಿ ನಡೆಸಿದ್ದಾರೆ. ಇನ್ನು ಘಟನೆಗೆ ಸಚಿವರು, ಶಾಸಕರೇ ಸಾಕ್ಷಿಗಳಾಗಿರುವ ಕಾರಣ ಅವರ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಈ ಆಧಾರದ ಮೇಲೆ ಕಂಪ್ಲಿ ಗಣೇಶ್​ಗೆ ಜಾಮೀನು ನೀಡಬೇಕಾಗಿದೆ ಅಂತಾ ಬಿ.ವಿ.ಆಚಾರ್ಯ ಮನವಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿಆರೋಪಿ ಹೊರ ಬಂದರೆ ಆನಂದ್ ಸಿಂಗ್​ ಜೀವ ಅಪಾಯವಿದೆ ಎಂದು ವಾದಿಸಿದ್ದರು. ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago