Featured

ಕಂಬಳದ ಭೀಷ್ಮನಿಗೆ ಅವಹೇಳನ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಖಂಡನೆ – vishwanews24

ಕಂಬಳದ ಭೀಷ್ಮನಿಗೆ ಅವಹೇಳನ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಖಂಡನೆ

ಕಾರ್ಕಳ: ಇತ್ತೀಚೆಗೆ ಮಂಗಳೂರು ಕಂಬಳದಲ್ಲಿ ಕಂಬಳ ಭೀಷ್ಮ ಎಂದೇ ಕರೆಯಲ್ಪಡುವ ಗುಣಪಾಲ ಕಡಂಬರನ್ನು ಕಂಬಳದ ವೇದಿಕೆಯಲ್ಲಿ ವ್ಯಕ್ತಿಯೊರ್ವರು ಸಾರ್ವಜನಿಕವಾಗಿ ಅವಹೇಳನ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ಆ ವ್ಯಕ್ತಿಯು ತಕ್ಷಣ ಕ್ಷಮೆ ಯಾಚಿಸುವಂತೆ ಆಗ್ರಹಿಸುತ್ತೇನೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಬಳ ಕ್ಷೇತ್ರಕ್ಕೆ ಗುಣಪಾಲ ಕಡಂಬರ ಕೊಡುಗೆ ಅಪಾರ ಕಂಬಳಕ್ಕಾಗಿ ತನ್ನ ಬದುಕನ್ನೆ ಮುಡುಪಾಗಿಟ್ಟ ಶ್ರೇಷ್ಠ ವ್ಯಕ್ತಿ. ಅವರ ಗಟ್ಟಿ ನಿರ್ಧಾರಗಳಿಂದ ಕಂಬಳದಲ್ಲಿ ಶಿಸ್ತು ಪಾಲನೆಯಾಗುತ್ತಿದೆ. ಕಂಬಳದ ಬೆಳವಣಿಗೆಗೆ ಅಕಾಡೆಮಿಯನ್ನು ಪ್ರಾರಂಭಿಸಿ ಅನೇಕ ಉದಯೋನ್ಮುಖ ಓಟಗಾರರು ಮತ್ತು ಪರಿಚಾರಕರು ಬೆಳೆಯಲು ಕಾರಣರಾದರು. ಅನೇಕ ಹೊಸ ಕಂಬಳ ಪ್ರಾರಂಭಕ್ಕೂ ಅವರು ಕಾರಣಕರ್ತರಾಗಿದ್ದಾರೆ.

ಕಂಬಳದಲ್ಲಿ ಗುಣಪಾಲ ಕಡಂಬರ ಧ್ವನಿಯೇ ಒಂದು ವಿಶೇಷ ಆಕರ್ಷಣೆಯಾಗಿದೆ. ಅವರ ಧ್ವನಿಯಲ್ಲಿ ಕಂಬಳದ ಇತಿಹಾಸವನ್ನು ಕೇಳಲು ಸಾವಿರಾರು ಕಂಬಳ ಅಭಿಮಾನಿಗಳು ನಿರೀಕ್ಷೆಯಲ್ಲಿರುತ್ತಾರೆ. ಅಂತಹ ವ್ಯಕ್ತಿಯ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಕಡಂಬರ ಜೊತೆ ಲಕ್ಷಾಂತರ ಕಂಬಳ ಅಭಿಮಾನಿಗಳು ಇದ್ದಾರೆ. ಅವಮಾನ ಮಾಡಿದ ವ್ಯಕ್ತಿಯನ್ನು ಕಂಬಳ ಕೂಟಕ್ಕೆ ಬಹಿಷ್ಕರಿಸಬೇಕು ಎಂದು ಶುಭದರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago