Featured

ಕಂಬಳವು ಅಂತಾರಾಷ್ಟ್ರೀಯ ಮನ್ನಣೆಯ ಕ್ರೀಡೆಯಾಗಬೇಕು: ಬೆಳಪು ದೇವಿಪ್ರಸಾದ್‌ ಶೆಟ್ಟಿ – Vishwanews24

ಕಂಬಳವು ಅಂತಾರಾಷ್ಟ್ರೀಯ ಮನ್ನಣೆಯ ಕ್ರೀಡೆಯಾಗಬೇಕು: ಬೆಳಪು ದೇವಿಪ್ರಸಾದ್‌ ಶೆಟ್ಟಿ

ಪಡುಬಿದ್ರಿ: ಕಂಬಳ ಒಂದು ಅಪರೂಪದ ಜಾನಪದ ಕ್ರೀಡೆ. ಕೋಣಗಳಿಗೆ ಅದ್ಭುತ ಶಕ್ತಿ ಇದೆ. ಇದರ ಹಿಂದೆ ಕೋಣ ಓಡಿಸುವವರ ಕೈ ಚಳಕ. ವೇಗದ ಓಟ, ಕೋಣ ಸಾಕುವವರ ಕ್ರಮ, ಎಲ್ಲಕ್ಕಿಂತ ಮುಖ್ಯವಾಗಿ ಕಂಬಳ ನಡೆಸುವ ವ್ಯವಸ್ಥಾಪಕರ ಪರಿಶ್ರಮ ಬಹಳಷ್ಟಿದೆ. ಹೀಗಾಗಿ ಕಂಬಳವು ಅಂತಾರಾಷ್ಟ್ರೀಯ ಮನ್ನಣೆಯ ಕ್ರೀಡೆಯಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಕಾಸರಗೋಡು, ದ. ಕ., ಉಡುಪಿ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಹೇಳಿದ್ದಾರೆ.

ಪಡುಬಿದ್ರಿಯಲ್ಲಿ ಪತ್ರಕರ್ತ ರೊಂದಿಗೆ ಅವರು ಮಾತನಾಡಿ, ಕಂಬಳಾಭಿಮಾನಿ ಸಿಎಂ ಸಿದ್ದರಾಮಯ್ಯ ಅವರ ಆಸೆಯಂತೆ ಬೆಂಗಳೂರಿನಲ್ಲಿ ಕಂಬಳ ನಡೆಸುವ ಬಗ್ಗೆ ತಯಾರಿ ನಡೆಸಲಾಗುತ್ತಿದೆ. ರಾಜಧಾನಿಯಲ್ಲಿ ಕಂಬಳ ನಡೆಯುತ್ತಿ ರುವುದು ಹೆಮ್ಮೆಯ ವಿಚಾರವಾಗಿದ್ದು ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವೂ ಅತ್ಯಗತ್ಯ ಎಂದರು.

ಕಂಬಳ ಭವನ ನಿರ್ಮಾಣದ ಆಶಯ
ಸುಮಾರು 1ಎಕ್ರೆ ಜಾಗದಲ್ಲಿ “ಕಂಬಳ ಭವನ’ ನಿರ್ಮಾಣದ ಯೋಜನೆಯಿದೆ. ಕಂಬಳದ ಕ್ರೀಡೆ ಯನ್ನು ಶಿಸ್ತು ಹಾಗೂ ಸಮಯ ಪಾಲನೆಯೊಂದಿಗೆ 24 ಗಂಟೆಗೊಳಗೆ ಮುಕ್ತಾಯಗೊಳಿಸುವುದು, ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಪ್ರಯತ್ನಿಸಲಾ ಗುವುದು. ಕಳೆದ ವರ್ಷ 18 ಕಂಬಳ ಜರಗಿತ್ತು. ಈ ಬಾರಿ 24 ಜೋಡುಕೆರೆ ಕಂಬಳಗಳ ಅರ್ಜಿ ಬಂದಿವೆ. ವೇಳಾಪಟ್ಟಿ ಸಿದ್ದಮಾಡುವುದೇ ಸಮಿತಿಯ ಮುಂದಿರುವ ದೊಡ್ಡ ಸವಾಲು. ಇದೀಗ 224 ಜೋಡಿ ಕೋಣಗಳು ಕಂಬಳ ಕೂಟದಲ್ಲಿ ಭಾಗವಹಿಸುತ್ತಿರುವುದು ಇತಿಹಾಸ. ಯುವಕರು, ಮಹಿಳೆಯರಲ್ಲದೇ ವಿದೇಶಿಗರೂ ಈ ಕ್ರೀಡೆಯತ್ತ ಆಕರ್ಷಿತರಾಗಿದ್ದಾರೆ ಎಂದು ಅವರು ವಿವರಿಸಿದರು

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

10 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

11 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

11 hours ago