ಪಡುಬಿದ್ರಿ: ಕಂಬಳ ಒಂದು ಅಪರೂಪದ ಜಾನಪದ ಕ್ರೀಡೆ. ಕೋಣಗಳಿಗೆ ಅದ್ಭುತ ಶಕ್ತಿ ಇದೆ. ಇದರ ಹಿಂದೆ ಕೋಣ ಓಡಿಸುವವರ ಕೈ ಚಳಕ. ವೇಗದ ಓಟ, ಕೋಣ ಸಾಕುವವರ ಕ್ರಮ, ಎಲ್ಲಕ್ಕಿಂತ ಮುಖ್ಯವಾಗಿ ಕಂಬಳ ನಡೆಸುವ ವ್ಯವಸ್ಥಾಪಕರ ಪರಿಶ್ರಮ ಬಹಳಷ್ಟಿದೆ. ಹೀಗಾಗಿ ಕಂಬಳವು ಅಂತಾರಾಷ್ಟ್ರೀಯ ಮನ್ನಣೆಯ ಕ್ರೀಡೆಯಾಗಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ಕಾಸರಗೋಡು, ದ. ಕ., ಉಡುಪಿ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದ್ದಾರೆ.
ಪಡುಬಿದ್ರಿಯಲ್ಲಿ ಪತ್ರಕರ್ತ ರೊಂದಿಗೆ ಅವರು ಮಾತನಾಡಿ, ಕಂಬಳಾಭಿಮಾನಿ ಸಿಎಂ ಸಿದ್ದರಾಮಯ್ಯ ಅವರ ಆಸೆಯಂತೆ ಬೆಂಗಳೂರಿನಲ್ಲಿ ಕಂಬಳ ನಡೆಸುವ ಬಗ್ಗೆ ತಯಾರಿ ನಡೆಸಲಾಗುತ್ತಿದೆ. ರಾಜಧಾನಿಯಲ್ಲಿ ಕಂಬಳ ನಡೆಯುತ್ತಿ ರುವುದು ಹೆಮ್ಮೆಯ ವಿಚಾರವಾಗಿದ್ದು ಕಂಬಳದ ಯಶಸ್ಸಿಗೆ ಎಲ್ಲರ ಸಹಕಾರವೂ ಅತ್ಯಗತ್ಯ ಎಂದರು.
ಕಂಬಳ ಭವನ ನಿರ್ಮಾಣದ ಆಶಯ
ಸುಮಾರು 1ಎಕ್ರೆ ಜಾಗದಲ್ಲಿ “ಕಂಬಳ ಭವನ’ ನಿರ್ಮಾಣದ ಯೋಜನೆಯಿದೆ. ಕಂಬಳದ ಕ್ರೀಡೆ ಯನ್ನು ಶಿಸ್ತು ಹಾಗೂ ಸಮಯ ಪಾಲನೆಯೊಂದಿಗೆ 24 ಗಂಟೆಗೊಳಗೆ ಮುಕ್ತಾಯಗೊಳಿಸುವುದು, ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಪ್ರಯತ್ನಿಸಲಾ ಗುವುದು. ಕಳೆದ ವರ್ಷ 18 ಕಂಬಳ ಜರಗಿತ್ತು. ಈ ಬಾರಿ 24 ಜೋಡುಕೆರೆ ಕಂಬಳಗಳ ಅರ್ಜಿ ಬಂದಿವೆ. ವೇಳಾಪಟ್ಟಿ ಸಿದ್ದಮಾಡುವುದೇ ಸಮಿತಿಯ ಮುಂದಿರುವ ದೊಡ್ಡ ಸವಾಲು. ಇದೀಗ 224 ಜೋಡಿ ಕೋಣಗಳು ಕಂಬಳ ಕೂಟದಲ್ಲಿ ಭಾಗವಹಿಸುತ್ತಿರುವುದು ಇತಿಹಾಸ. ಯುವಕರು, ಮಹಿಳೆಯರಲ್ಲದೇ ವಿದೇಶಿಗರೂ ಈ ಕ್ರೀಡೆಯತ್ತ ಆಕರ್ಷಿತರಾಗಿದ್ದಾರೆ ಎಂದು ಅವರು ವಿವರಿಸಿದರು
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…