Featured

ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ‘ರಾಕೆಟ್ ಮೋಡ ‘ಖ್ಯಾತಿಯ ಕೋಣ ‘ಕಂಬಳದ ಕರೆ’ಯಿಂದ ಮರೆ ., ಇನ್ನು ನೆನಪು ಮಾತ್ರ..

ಉಡುಪಿ: ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ರಾಕೆಟ್ ಮೋಡ ಖ್ಯಾತಿಯ ಕಂಬಳದ ಕೋಣ ಇನ್ನು ನೆನಪು ಮಾತ್ರ.ತನ್ನ ಚಿಗರೆಯ ಓಟದ ವೈಖರಿಯಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ, ರಾಕೆಟ್ ಮೋಡ ಅಭಿಮಾನಿಗಳ ಹೃದಯವನ್ನು ಆರ್ದ್ರಗೊಳಿಸಿ ಬಾರದ ಲೋಕಕ್ಕೆ ಹೊರಟಿದ್ದಾನೆ.

ಅಧುನಿಕ ಕಂಬಳಕ್ಕೆ ವಿಶಿಷ್ಟ ಕೊಡುಗೆ ನೀಡದ ನಂದಳಿಕೆ ಶ್ರೀಕಾಂತ್ ಭಟ್ ಅವರ ಪ್ರೀತಿಯ, 20 ವರ್ಷದ ಕಂಬಳ ಕೋಣ ರಾಕೆಟ್ ಮೋಡ ವಯೋ ಸಹಜ ಕಾಯಿಲೆಯಿಂದ ಮಂಗಳವಾರ ಬೆಳಗ್ಗೆ ಮೃತಪಟ್ಟಿದಾನೆ. ಕರಾವಳಿಯ ಕಂಬಳ ಪ್ರಿಯರಿಗೆ ದುಃಖ ತಂದಿದೆ. ಕಂಬಳ ಕ್ಷೇತ್ರದಲ್ಲಿ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ನೂರಾರು ಬಹುಮಾನಗಳನ್ನು ಗೆದ್ದ ಹೆಗ್ಗಳಿಕೆ ಈ ರಾಕೆಟ್ ಮೋಡ ಕೋಣದ್ದಾಗಿತ್ತು.

ರಾಕೆಟ್ ಈವರೆಗೆ 100ಕ್ಕೂ ಅಧಿಕ ಪದಕ ಪದೆದಿದ್ದು ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ಕೀರ್ತಿ ಪಡೆದಿದ್ದಾನೆ.144 ಮೀ ನ್ನು 13.57 ಸೆಕೆಂಡ್ ನಲ್ಲಿ ಕ್ರಮಿಸುವ ಮೂಲಕ ಕಂಬಳ ಇತಿಹಾಸದಲ್ಲಿ ಇನ್ನು ಅಳಿಸಲಾಗದ ದಾಖಲೆ ಸೃಷ್ಟಿಸಿದ್ದಾನೆ.

ಇದು ಮಾತ್ರವಲ್ಲದೆ, ಕಂಬಳ ಪ್ರಿಯರಿಗೆ ಇದು ಚಿರಪರಿಚಿತ ಕೋಣವಾಗಿತ್ತು. ಕೊಂಡೊಟ್ಟು ಮೋಡ, ರಾಕೆಟ್ ಮೋಡ ಎಂಬ ಹೆಸರಿನಿಂದಲೇ ಕಂಬಳ ಪ್ರಿಯರು ಇದನ್ನು ಕರೆಯುತ್ತಿದ್ದರು. ಪ್ರತಿಷ್ಠಿತ ಕಂಬಳ ಮನೆತನದ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಮನೆಯಲ್ಲಿದ್ದ ಈ ಓಟದ ಸರದಾರ ಬಳಿಕ ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ ಅವರ ಮನೆಯಲ್ಲಿತ್ತು.ನಂತರ ಹಲವು ದಿನಗಳಿಂದ ನಂದಳಿಕೆ ಶ್ರೀಕಾಂತ್ ಭಟ್ ಅವರ ಮನೆಯಲ್ಲಿತ್ತು.

ಕಂಬಳ ಕೋಣದ ಅಂತ್ಯ ಸಂಸ್ಕಾರವನ್ನು ಶಾಸ್ತ್ರಬದ್ಧವಾಗಿ ಮಾಡಿದ್ದು ವಿಶೇಷ ಮತ್ತು ಈ ವೇಳೆ ನೂರಾರು ಜನ ಕಂಬಳ ಪ್ರಿಯರು , ಕಂಬಳ ಯಜಮಾನರು, ಊರವರ ದಂಡೇ ಶ್ರೀಕಾಂತ್ ಭಟ್ ಅವರ ಮನೆಗೆ ಆಗಮಿಸಿ ರಾಕೆಟ್ ಮೋಡದ ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಕಂಬನಿ ಮಿಡಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

8 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

8 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

8 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

9 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

10 hours ago