ಮಂಗಳೂರು: ಮೂಡಬಿದಿರೆ ಕಂಬಳದಲ್ಲಿ ಅತ್ಯಂತ ವೇಗವಾಗಿ ಓಡಿರುವ ಶ್ರೀನಿವಾಸ ಗೌಡ 30 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ಉಸೇನ್ ಬೋಲ್ಟ್ ಜಗತ್ತಿನ ಅತೀ ವೇಗದ ಓಟಗಾರ. ಮಿಂಚಿನಂತೆ ಕ್ಷಣ ಮಾತ್ರದಲ್ಲಿ ಗುರಿತಲುಪುವ ಸಾಧಕ.ಉಸೇನ್ ಬೋಲ್ಟ್ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಕರಾವಳಿಯ ಕಂಬಳ ಕೋಣಗಳ ಓಟಗಾರ ಶ್ರೀನಿವಾಸ್ ಹೊಸ ದಾಖಲೆ ಬರೆದಿದ್ದಾರೆ.
142.50 ಮೀಟರ್ ಉದ್ದದ ಕಂಬಳದ ಕೆಸರು ಗದ್ದೆಯ ಗುರಿಯನ್ನು ಕೇವಲ 13.62 ಸೆಕೆಂಡ್ ಗಳಲ್ಲಿ ತಲುಪಿ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ ಶ್ರೀನಿವಾಸ್ ಗೌಡ (28). ಈ ಹಿಂದೆ 1990 ರಲ್ಲಿ ಬೆಳ್ತಂಗಡಿಯಲ್ಲಿ ಅತ್ಯಂತ ವೇಗವಾಗಿ ಓಡಿದ್ದ ದಾಖಲೆ ನಿರ್ಮಾಣವಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶ್ರೀನಿವಾಸ್ ಗೌಡ ಅವರು, ಇತ್ತೀಚೆಗೆ ಐಕಳದಲ್ಲಿ ನಡೆದ ನೇಗಿಲು ಹಿರಿಯ ಕಂಬಳದಲ್ಲಿ 145 ಮೀಟರ್ ಓಟವನ್ನು ಕೇವಲ 13.61 ಸೆಕೆಂಡ್‌ನಲ್ಲಿ ಓಡಿದ್ದಾರೆ. ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್ 100 ಮೀಟರ್ ದೂರವನ್ನು 9.58 ಸೆಕೆಂಡ್‌ಗಳಲ್ಲಿ ಓಡಿದ್ದರು.
ಶ್ರೀನಿವಾಸ್ ಗೌಡ ಈ ವರೆಗೂ 12 ಕಂಬಳಗಳಲ್ಲಿ ಭಾಗವಹಿಸಿದ್ದು 29 ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಐಕಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ವಿಭಾಗಗಳಲ್ಲೂ ಬಹುಮಾನ ಗೆಲ್ಲುವ ಮೂಲಕ ಮತ್ತೊಂದು ದಾಖಲೆಯನ್ನೂ ನಿರ್ಮಿಸಿರುವ ಕೀರ್ತಿ ಶ್ರೀನಿವಾಸ್ ಗೌಡ ಅವರಿಗೆ ಸಲ್ಲುತ್ತದೆ.
ಶಾಲಾ ವಿದ್ಯಾಭ್ಯಾಸವನ್ನು ಅರ್ಧಕ್ಕೇ ಬಿಟ್ಟ ಶ್ರೀನಿವಾಸ್ ಗೌಡ, ತಮ್ಮ ಬಾಲ್ಯದಿಂದ ಕಂಬಳದತ್ತ ಆಕರ್ಷಿತರಾಗಿದ್ದರು.
ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದೆ. ಶ್ರೀನಿವಾಸ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್‍ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…