Featured

ಕಂಬಳ ಕ್ಷೇತ್ರದಲ್ಲಿ ಸಾಮ್ರಾಟನಾಗಿ ಮೆರೆದಿದ್ದ ಕೊಂಡೆಟ್ಟು ಚೆನ್ನ ಇನ್ನಿಲ್ಲ – vishwanews24

ಕಂಬಳ ಕ್ಷೇತ್ರದಲ್ಲಿ ಸಾಮ್ರಾಟನಾಗಿ ಮೆರೆದಿದ್ದ ಕೊಳಚೂರು ಕೊಂಡೆಟ್ಟು ಚೆನ್ನ ಇನ್ನಿಲ್ಲ

ಕಾರ್ಕಳ: ಕಂಬಳ ಕೂಟದ ಅತ್ಯಂತ ಜನಪ್ರಿಯ, ಅತಿ ಹೆಚ್ಚು ಪ್ರಶಸ್ತಿ ವಿಜೇತ ಪಟ್ಟಿಯಲ್ಲಿ ಅಗ್ರಗಣ್ಯ ಕೋಣ ಕೊಳಚೂರು ಕೊಂಡೊಟ್ಟು ಸುಕುಮಾರ್ ಶೆಟ್ಟಿ ಅವರ ‘ಚೆನ್ನ’ ಎಂಬ ಹೆಸರಿನ ಕೋಣ ಗುರುವಾರ (ಆ.14) ಅಸುನೀಗಿದೆ.

ವಯೋಸಹಜ ಅಸೌಖ್ಯದ ಕಾರಣದಿಂದ ಚೆನ್ನ ಅಸುನೀಗಿದೆ. ಗುರುವಾರ ಸಂಜೆ ಅದರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ವರದಿ ಹೇಳಿದೆ.

ಕಂಬಳ ಕ್ಷೇತ್ರದಲ್ಲಿ ರಾಜನಾಗಿ ಮೆರೆದ ಚೆನ್ನ ವಿಧಿವಶನಾಗಿದ್ದಾನೆ. ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ರ ಕಿಂಗ್ ಚೆನ್ನ ಇನ್ನು ನೆನಪು ಮಾತ್ರ. ತರಬೇತಿಯಿಲ್ಲದೆ 4 ರ ಹರೆಯದಲ್ಲೇ ಕಂಬಳಕ್ಕೆ ಇಳಿದಿದ್ದ ಚೆನ್ನ ಕಂಬಳಾಭಿಮಾನಿಗಳಿಗೆ ಅಚ್ಚುಮೆಚ್ಚಿನವನಾಗಿದ್ದ. ಹಲವಾರು ಪದಕ ಗೆದ್ದಿರುವ ಕೀರ್ತಿ ಅವನದು.

ಕಡಂದಲೆ ಕಾಳು ಪಾಣಾರ ಅವರ ಹಟ್ಟಿಯಲ್ಲಿದ್ದ ಚೆನ್ನನನ್ನು ಬಾರ್ಕೂರು ಶಾಂತಾರಾಮ ಶೆಟ್ಟಿ ಸುಮಾರು 22 ವರ್ಷಗಳ ಹಿಂದೆ ತಮ್ಮ ಹಟ್ಟಿಗೆ ತಂದಿದ್ದರು. ಮೂಡಬಿದಿರೆಯ ಕೋಟಿ-ಚೆನ್ನಯ ಕಂಬಳದ ಮೊದಲ ಮೂರು ವರ್ಷವೂ ನೇಗಿಲು ಜೂನಿಯರ್ ವಿಭಾಗದಲ್ಲಿ ಬಾರ್ಕೂರು ಶಾಂತಾರಾಮ ಶೆಟ್ಟಿಯವರಿಗೆ ಚೆನ್ನ ಪದಕ ಗೆದ್ದು ಕೊಟ್ಟಿದ್ದ. ಬಳಿಕ ಸೀನಿಯರ್ ಆದಾಗ ಚೆನ್ನ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ರ ಹಟ್ಟಿಗೆ ತೆರಳಿದ್ದ.

ಹಗ್ಗ ಹಿರಿಯ ವಿಭಾಗದಲ್ಲಿ ಗೆಂದಬೆಟ್ಟು ಮೋಡೆ ಮತ್ತು ಚೆನ್ನ ಜೊತೆಯಾಗಿ ಹಲವಾರು ಪ್ರಶಸ್ತಿ ಗೆದ್ದಿದ್ದಾರೆ. ನಾಲ್ಕು ಬಾರಿ ಸರಣಿ ಶೇಷ್ಠ ಪ್ರಶಸ್ತಿ ಪಡೆದಿರುವ ಚೆನ್ನ ಸತತ 13 ವರ್ಷ ಪದಕ ಗೆದ್ದು ಬೀಗಿದ್ದಾನೆ.

ಸಾಧು ಸ್ವಭಾವದವನಾಗಿದ್ದ ಚೆನ್ನ ಮತ್ತೊಂದು ವಿಚಾರಕ್ಕೆ ಗಮನಸೆಳೆದಿದ್ದ.

ಚೆನ್ನನಿಗೆ ಅಂದಾಜು 25 ವರ್ಷ ವಯಸ್ಸಾಗಿದ್ದು, ಕಳೆದ ಮೂರು ವರ್ಷದಿಂದ ಓಡುತ್ತಿರಲಿಲ್ಲ. ವಿಶ್ರಾಂತಿಯಲ್ಲಿದ್ದ ಚೆನ್ನ ಇದೀಗ ಇಹಲೋಕ ತ್ಯಜಿಸಿದ್ದಾನೆ. ಚೆನ್ನನ ಅಗಲಿಕೆ ಕಂಬಳಾಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

20 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

21 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

21 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

22 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

22 hours ago