ಒಂಟಿಕಟ್ಟೆಯಲ್ಲಿರುವ ಕೋಟಿ ಚೆನ್ನಯ ಕಂಬಳ ಕ್ರೀಡಾಂಗಣ ಸಮೀಪದ ಸಭಾಭವನದಲ್ಲಿ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿದ ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ಕುರಿತು ಸುದೀರ್ಘವಾಗಿ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು.
24 ಗಂಟೆಗಳಲ್ಲಿ ಮುಗಿಯಬೇಕಾದ ಕಂಬಳಗಳು ವಿನಾಕಾರಣ ವಿಳಂಬಗೊಳ್ಳುತ್ತಿದ್ದು, ಇದು ಸರಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಈ ರೀತಿಯ ಉಲ್ಲಂಘನೆ ಸೂಕ್ತವಾದುದಲ್ಲ ಎಂದರು.
ಈ ನಿಟ್ಟಿನಲ್ಲಿ ನಾವು ಸುಧಾರಣೆಗೊಳ್ಳದಿದ್ದರೆ ಕಂಬಳ ನಿಷೇಧಕ್ಕೆ ನಾವೇ ಅನುವು ಮಾಡಿಕೊಟ್ಟಂತಾಗುತ್ತದೆ ಎಂದು ದೇವಿಪ್ರಸಾದ್ ಶೆಟ್ಟಿ ಹೇಳಿದರು.
ಸಮಯ ಪರಿಪಾಲನೆಯನ್ನು ಕಟ್ಟುನಿಟ್ಟು ಮಾಡಲು ನಿಯಮಗಳನ್ನು ಮತ್ತಷ್ಟು ಬಲಗೊಳಿಸಲಾಗಿದೆ. ಒಬ್ಬ ಓಟಗಾರರನಿಗೆ ಪ್ರತಿ ವಿಭಾಗದಲ್ಲೂ ಒಂದು ಜತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶವಿದೆ. ಅನಿವಾರ್ಯ ಸಂದರ್ಭದಲ್ಲಿ ತೀರ್ಪುಗಾರರ ಹಾಗೂ ವ್ಯವಸ್ಥಾಪಕರ ಅನುಮತಿ ಪಡೆದ ಬಳಿಕ ಮಾತ್ರ ಎರಡು ಜತೆ ಕೋಣಗಳನ್ನು ಓಡಿಸಬಹುದು. ಉಳಿದಂತೆ ನಿಯಮಗಳಲ್ಲಿ ಸಡಿಲಿಕೆ ಇಲ್ಲ ಎಂದು ಅವರು ವಿವರಿಸಿದರು.
ಆ್ಯಂಬುಲೆನ್ಸ್, ಪ್ರಥಮ ಚಿಕಿತ್ಸೆ ಕೇಂದ್ರ ಕಡ್ಡಾಯ ಕೋಣಗಳ ಯಜಮಾನ ತ್ರಿಶಾಲ್ ಪೂಜಾರಿ ಮಾತನಾಡಿ, ಮೂಲ್ಕಿಯಲ್ಲಿ ನಡೆದ ಕಂಬಳದಲ್ಲಿ ನಮ್ಮ ಓಟಗಾರನ ಕಾಲಿಗೆ ಬಲವಾದ ಪೆಟ್ಟಾಗಿ ಆಸ್ಪತ್ರೆಗೆ ಆಟೋದಲ್ಲಿ ಸಾಗಿಸಲಾಗಿತ್ತು. ಇಂತಹ ತುರ್ತು ಸಂದರ್ಭದಲ್ಲಿ ಕಂಬಳ ಆಯೋಜಕರು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.
ಆ್ಯಂಬುಲೆನ್ಸ್ ಹಾಗೂ ಪ್ರಥಮ ಚಿಕಿತ್ಸೆ ಕೇಂದ್ರವನ್ನು ಎಲ್ಲ ಕಂಬಳಗಳಲ್ಲಿ ಕಡ್ಡಾಯಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷರು ಹೇಳಿದರು.
ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್ ಕಂಗಿನಮನೆ, ಮಾಜಿ ಅಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ತೀರ್ಪುಗಾರ ರಾಜೀವ್ ಶೆಟ್ಟಿ ಎಡೂ¤ರು, ಅಡ್ವೆ ಕಂಬಳದ ವ್ಯವಸ್ಥಾಪಕ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…