Featured

ಕಂಬಳ ನಿಯಮ ಮೀರುವ ಸದಸ್ಯರಿಗೆ ಎರಡು ಕಂಬಳಗಳಿಗೆ ನಿಷೇಧ : ಜಿಲ್ಲಾ ಕಂಬಳ ಸಮಿತಿ ಎಚ್ಚರಿಕೆ – vishwanews24

ಒಂಟಿಕಟ್ಟೆಯಲ್ಲಿರುವ ಕೋಟಿ ಚೆನ್ನಯ ಕಂಬಳ ಕ್ರೀಡಾಂಗಣ ಸಮೀಪದ ಸಭಾಭವನದಲ್ಲಿ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್‌ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿದ ಜಿಲ್ಲಾ ಕಂಬಳ ಸಮಿತಿಯ ತುರ್ತು ಸಭೆಯಲ್ಲಿ ಈ ಕುರಿತು ಸುದೀರ್ಘ‌ವಾಗಿ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು.
24 ಗಂಟೆಗಳಲ್ಲಿ ಮುಗಿಯಬೇಕಾದ ಕಂಬಳಗಳು ವಿನಾಕಾರಣ ವಿಳಂಬಗೊಳ್ಳುತ್ತಿದ್ದು, ಇದು ಸರಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಈ ರೀತಿಯ ಉಲ್ಲಂಘನೆ ಸೂಕ್ತವಾದುದಲ್ಲ ಎಂದರು.

ಈ ನಿಟ್ಟಿನಲ್ಲಿ ನಾವು ಸುಧಾರಣೆಗೊಳ್ಳದಿದ್ದರೆ ಕಂಬಳ ನಿಷೇಧಕ್ಕೆ ನಾವೇ ಅನುವು ಮಾಡಿಕೊಟ್ಟಂತಾಗುತ್ತದೆ ಎಂದು ದೇವಿಪ್ರಸಾದ್‌ ಶೆಟ್ಟಿ ಹೇಳಿದರು.

ಸಮಯ ಪರಿಪಾಲನೆಯನ್ನು ಕಟ್ಟುನಿಟ್ಟು ಮಾಡಲು ನಿಯಮಗಳನ್ನು ಮತ್ತಷ್ಟು ಬಲಗೊಳಿಸಲಾಗಿದೆ. ಒಬ್ಬ ಓಟಗಾರರನಿಗೆ ಪ್ರತಿ ವಿಭಾಗದಲ್ಲೂ ಒಂದು ಜತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶವಿದೆ. ಅನಿವಾರ್ಯ ಸಂದರ್ಭದಲ್ಲಿ ತೀರ್ಪುಗಾರರ ಹಾಗೂ ವ್ಯವಸ್ಥಾಪಕರ ಅನುಮತಿ ಪಡೆದ ಬಳಿಕ ಮಾತ್ರ ಎರಡು ಜತೆ ಕೋಣಗಳನ್ನು ಓಡಿಸಬಹುದು. ಉಳಿದಂತೆ ನಿಯಮಗಳಲ್ಲಿ ಸಡಿಲಿಕೆ ಇಲ್ಲ ಎಂದು ಅವರು ವಿವರಿಸಿದರು.

ಆ್ಯಂಬುಲೆನ್ಸ್‌, ಪ್ರಥಮ ಚಿಕಿತ್ಸೆ ಕೇಂದ್ರ ಕಡ್ಡಾಯ ಕೋಣಗಳ ಯಜಮಾನ ತ್ರಿಶಾಲ್‌ ಪೂಜಾರಿ ಮಾತನಾಡಿ, ಮೂಲ್ಕಿಯಲ್ಲಿ ನಡೆದ ಕಂಬಳದಲ್ಲಿ ನಮ್ಮ ಓಟಗಾರನ ಕಾಲಿಗೆ ಬಲವಾದ ಪೆಟ್ಟಾಗಿ ಆಸ್ಪತ್ರೆಗೆ ಆಟೋದಲ್ಲಿ ಸಾಗಿಸಲಾಗಿತ್ತು. ಇಂತಹ ತುರ್ತು ಸಂದರ್ಭದಲ್ಲಿ ಕಂಬಳ ಆಯೋಜಕರು ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.

ಆ್ಯಂಬುಲೆನ್ಸ್‌ ಹಾಗೂ ಪ್ರಥಮ ಚಿಕಿತ್ಸೆ ಕೇಂದ್ರವನ್ನು ಎಲ್ಲ ಕಂಬಳಗಳಲ್ಲಿ ಕಡ್ಡಾಯಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷರು ಹೇಳಿದರು.
ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಶೆಟ್ಟಿ, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್‌ ಕಂಗಿನಮನೆ, ಮಾಜಿ ಅಧ್ಯಕ್ಷ ರೋಹಿತ್‌ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷ ರಶ್ಮಿತ್‌ ಶೆಟ್ಟಿ, ತೀರ್ಪುಗಾರ ರಾಜೀವ್‌ ಶೆಟ್ಟಿ ಎಡೂ¤ರು, ಅಡ್ವೆ ಕಂಬಳದ ವ್ಯವಸ್ಥಾಪಕ ಕೊಳಚೂರು ಕೊಂಡೊಟ್ಟು ಸುಕುಮಾರ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago