Featured

ಕಂಬಳ ನಿಷೇಧಿಸುವಂತೆ ‘ಪೇಟಾ’ ಮೇಲ್ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ -Vishwanews24

ಕಂಬಳ ನಿಷೇಧಿಸುವಂತೆ ‘ಪೇಟಾ’ ಮೇಲ್ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ

ನವದೆಹಲಿ: ಕಂಬಳ ಕೂಟ ವಿಷಯ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಕಾಯ್ದಿರಿಸಿದೆ. ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯು ಸುಪ್ರೀಂಕೋರ್ಟ್​ನಲ್ಲಿ ತಕರಾರು ಅರ್ಜಿ ಸಲ್ಲಿಸಿತ್ತು. ಕೆಲವೇ ದಿನಗಳಲ್ಲಿ ಜಲ್ಲಿಕಟ್ಟು, ಕಂಬಳ ಮುಂತಾದ ಕ್ರೀಡೆಗಳ ಕುರಿತು ಸುಪ್ರೀಂಕೋರ್ಟ್ ಸಾಂವಿಧಾನಿಕ‌ ಪೀಠ ಅಂತಿಮ ತೀರ್ಪು ಪ್ರಕಟಿಸಲಿದೆ.

ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ. ಆದ್ದರಿಂದ ಕಂಬಳ ಆಯೋಜನೆಗೆ ನಿಷೇಧ ಹೇರಬೇಕು ಎಂದು ಪ್ರಾಣಿದಯಾ ಸಂಘ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಇದರ ವಿರುದ್ಧ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಮತ್ತಿತರರು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಈ ಹಿಂದೆ ರಾಷ್ಟ್ರಪತಿಯವರು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಂಬಳ ಕೂಟಕ್ಕೆ ಅವಕಾಶ ಕಲ್ಪಿಸಿದ್ದರು.

ಆ ಬಳಿಕ ಕರ್ನಾಟಕದ ಕರಾವಳಿ ಭಾಗದಲ್ಲಿ ನಿರಾತಂಕವಾಗಿ ಕಂಬಳ ಕೂಟ ನಡೆಯುತ್ತಿತ್ತು. ಈ ಮಧ್ಯೆ, ಪ್ರಾಣಿದಯಾ ಸಂಘದವರು ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಕಂಬಳವನ್ನು ನಿಷೇಧಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರ ಇದಕ್ಕೆ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು.

ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸವಿದೆ. ಧಾರ್ಮಿಕ ಪರ‌ಂಪರೆ ಇದೆ. ಕಂಬಳದಲ್ಲಿ ಕೋಣಗಳಿಗೆ ಹಿಂಸೆ ಆಗುವುದಿಲ್ಲ. ಮಕ್ಕಳಂತೆ ಕೋಣಗಳನ್ನು ಸಾಕಿ ಸಲಹಲಾಗುತ್ತಿದೆ‌. ಆದ್ದರಿಂದ ಕಂಬಳ ಕೂಟಕ್ಕೆ ನಿಷೇಧ ಹೇರಬಾರದು. ಎಂದಿನಂತೆ ಕಂಬಳ ಕೂಟ ಆಯೋಜನೆಗೆ ಅವಕಾಶ ಕೊಡಬೇಕು ಎಂದು ಕಂಬಳ ಸಮಿತಿಗಳ ಪರವಾಗಿ ಅಶೋಕ್ ಕುಮಾರ್ ರೈ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ಜಲ್ಲಿಕಟ್ಟು, ಕಂಬಳ ಮುಂತಾದ ಕ್ರೀಡೆಗಳ ಕುರಿತು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಅಂತಿಮ ತೀರ್ಪು ಪ್ರಕಟಿಸಲಿದೆ. ಅಶೋಕ್ ರೈ ಪರ ಖ್ಯಾತ ವಕೀಲ ಸಂಜಯ್ ನೂಲಿ ವಾದ ಮಂಡಿಸುತ್ತಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago