ನವದೆಹಲಿ: ಕಂಬಳ ಕೂಟ ವಿಷಯ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಕಾಯ್ದಿರಿಸಿದೆ. ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯು ಸುಪ್ರೀಂಕೋರ್ಟ್ನಲ್ಲಿ ತಕರಾರು ಅರ್ಜಿ ಸಲ್ಲಿಸಿತ್ತು. ಕೆಲವೇ ದಿನಗಳಲ್ಲಿ ಜಲ್ಲಿಕಟ್ಟು, ಕಂಬಳ ಮುಂತಾದ ಕ್ರೀಡೆಗಳ ಕುರಿತು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಅಂತಿಮ ತೀರ್ಪು ಪ್ರಕಟಿಸಲಿದೆ.
ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ. ಆದ್ದರಿಂದ ಕಂಬಳ ಆಯೋಜನೆಗೆ ನಿಷೇಧ ಹೇರಬೇಕು ಎಂದು ಪ್ರಾಣಿದಯಾ ಸಂಘ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಇದರ ವಿರುದ್ಧ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಮತ್ತಿತರರು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಈ ಹಿಂದೆ ರಾಷ್ಟ್ರಪತಿಯವರು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಂಬಳ ಕೂಟಕ್ಕೆ ಅವಕಾಶ ಕಲ್ಪಿಸಿದ್ದರು.
ಆ ಬಳಿಕ ಕರ್ನಾಟಕದ ಕರಾವಳಿ ಭಾಗದಲ್ಲಿ ನಿರಾತಂಕವಾಗಿ ಕಂಬಳ ಕೂಟ ನಡೆಯುತ್ತಿತ್ತು. ಈ ಮಧ್ಯೆ, ಪ್ರಾಣಿದಯಾ ಸಂಘದವರು ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಕಂಬಳವನ್ನು ನಿಷೇಧಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರ ಇದಕ್ಕೆ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು.
ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸವಿದೆ. ಧಾರ್ಮಿಕ ಪರಂಪರೆ ಇದೆ. ಕಂಬಳದಲ್ಲಿ ಕೋಣಗಳಿಗೆ ಹಿಂಸೆ ಆಗುವುದಿಲ್ಲ. ಮಕ್ಕಳಂತೆ ಕೋಣಗಳನ್ನು ಸಾಕಿ ಸಲಹಲಾಗುತ್ತಿದೆ. ಆದ್ದರಿಂದ ಕಂಬಳ ಕೂಟಕ್ಕೆ ನಿಷೇಧ ಹೇರಬಾರದು. ಎಂದಿನಂತೆ ಕಂಬಳ ಕೂಟ ಆಯೋಜನೆಗೆ ಅವಕಾಶ ಕೊಡಬೇಕು ಎಂದು ಕಂಬಳ ಸಮಿತಿಗಳ ಪರವಾಗಿ ಅಶೋಕ್ ಕುಮಾರ್ ರೈ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ಜಲ್ಲಿಕಟ್ಟು, ಕಂಬಳ ಮುಂತಾದ ಕ್ರೀಡೆಗಳ ಕುರಿತು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಅಂತಿಮ ತೀರ್ಪು ಪ್ರಕಟಿಸಲಿದೆ. ಅಶೋಕ್ ರೈ ಪರ ಖ್ಯಾತ ವಕೀಲ ಸಂಜಯ್ ನೂಲಿ ವಾದ ಮಂಡಿಸುತ್ತಿದ್ದಾರೆ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…