Featured

ಕಂಬಳ ಹಿಂದೆ ಬಿದ್ದಿರುವ ಪೇಟಾ , ಕಂಬಳದಲ್ಲಿ ನಡೆದಿರುವ ಹಿಂಸೆ ಬಗ್ಗೆ ತನಿಖಾ ವರದಿ ಸುಪ್ರೀಂ ಗೆ ಸಲ್ಲಿಕೆ -Vishwanews24

ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳ ಹಿಂದೆ ಬಿದ್ದಿರುವ ಪೇಟಾ ಈಗ ಮತ್ತೆ ಸುಪ್ರೀಂಕೋರ್ಟ್ ಕದ ತಟ್ಟಿದೆ. ಕಳೆದ ಕಂಬಳ ಋುತುವಿನಲ್ಲಿ ನಡೆದ ಕಂಬಳದಲ್ಲಿ ಹಿಂಸೆ ನಡೆದಿರುವ ಬಗ್ಗೆ ತನಿಖಾ ವರದಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವುದಾಗಿ ಪೇಟಾ ತಿಳಿಸಿದೆ.

ಪೆಟಾ ಕಳೆದ ವರ್ಷ ಡಿಸೆಂಬರ್‌ ಮತ್ತು ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ನಡೆದ ಬಾರಾಡಿಬೀಡು, ಮೂಡುಬಿದಿರೆ, ಮಂಗಳೂರು ಮತ್ತು ತಿರುವೈಲ್‌ನಲ್ಲಿ ನಡೆದಿರುವ ಕಂಬಳಗಳಲ್ಲಿ ತಪಾಸಣೆ ಮಾಡಿದ್ದು, ಕೋಣಗಳ ಮೇಲಿನ ಹಿಂಸೆ ಮತ್ತು ಕೌರ್ಯವನ್ನು ತಡೆಯಲು ಕರ್ನಾಟಕದ ಕಂಬಳಗಳು ವಿಫಲವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ತುಳುನಾಡಿನ ಪ್ರಸಿದ್ಧ ಕಂಬಳ ಮತ್ತೊಮ್ಮೆ ಆಚರಣೆಗೆ ಬಂದಿದ್ದು, ಕೆಲವು ವಾರಗಳ ಹಿಂದಷ್ಟೇ ಮಂಗಳೂರಿನ ವಿವಿಧ ಕಡೆ ನಡೆಯುವ ಕಂಬಳದ ದಿನಾಂಕ, ಸ್ಥಳ ಸೇರಿ ವೇಳಾ ಪಟ್ಟಿ ಪ್ರಕಟವಾಗಿತ್ತು.

1960ರ ಪ್ರಾಣಿ ಹಿಂಸೆ ತಡೆ ಕಾಯಿದೆ ಪ್ರಕಾರ ಪ್ರಾಣಿಯನ್ನು ಹಿಂಸಿಸುವುದು ನಿಷೇಧಿಸಲಾಗಿದ್ದು, ಯಾವುದೇ ರೀತಿಯಲ್ಲಿ ಪ್ರಾಣಿಗಳಿಗೆ ನೋವು ಮಾಡುವುದನ್ನು ಕಾಯಿದೆ ವಿರೋಧಿಸುತ್ತದೆ. ಪ್ರಾಣಿಗಳನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಳ್ಳಬೇಕೆಂಬ ನಿಯಮವಿದೆ. ಆದರೆ ಬರದಿ ಬೀಡಿನ ಕಂಬಳದಲ್ಲಿ ಕೋಣಕ್ಕೆ ಹಿಂಸಿಸಲಾಗುತ್ತದೆ ಎಂದು ಆರೋಪಿಸಿ, ಪೆಟಾ ವಿರೋಧ ವ್ಯಕ್ತಪಡಿಸಿದೆ. ಪೆಟಾ ನಡೆಗೆ ತುಳು ನಾಡಿನ ಮಂದಿಯೂ ಸೋಷಿಯಲ್ ಮೀಡಿಯಾದಲ್ಲಿ ವಿಧವಿಧವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟಾ ಇಂಡಿಯಾದಿಂದ ತಪಾಸಣೆ ಮಾಡಲಾದ ಎಲ್ಲ 4 ಕಂಬಳಗಳಲ್ಲಿ ಕಂಬಳ ಓಟದ ಸ್ಪರ್ಧೆಗೆ ಅನುವು ಮಾಡಿಕೊಡುವ ರಾಜ್ಯದ ತಿದ್ದುಪಡಿಗಳು ಕೋಣಗಳನ್ನು ಹಿಂಸೆಯಿಂದ ರಕ್ಷಿಸುವಲ್ಲಿ ಎಷ್ಟು ಅನುಪಯುಕ್ತ ಎನ್ನುವುದನ್ನು ಎತ್ತಿ ತೋರಿಸುತ್ತದೆ.

ಪೆಟಾ ದಾಖಲು ಮಾಡಿರುವ ದೂರು ಕರ್ನಾಟಕದ ಹೊಸ ಕಾನೂನಿನ ಸಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುತ್ತದೆ ಮತ್ತು ಅದನ್ನು ಕಿತ್ತು ಹಾಕಲು ನಿರ್ದೇಶನವನ್ನು ಕೋರುತ್ತದೆ ಎಂದು ಪೆಟಾದ ಪ್ರಕಟನೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago