ರಾಜ್ಯ ನ್ಯೂಸ್

ಕಗ್ಗಾಂಟಾದ ಅತೃಪ್ತರು ಬಿಜೆಪಿ ಸಂಪರ್ಕದಲ್ಲಿ – ಸಿಎಂ ಆಗುವುದಕ್ಕೆ ಬಿಎಸ್​ವೈ ಸಿದ್ದತೆ…!!

ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಅಕಾಂಕ್ಷಿಗಳು ಹೆಚ್ಚಾಗಿರುವ ಕಾರಣದಿಂದಾಗಿ ಅತೃಪ್ತರನ್ನು ಸಮಾಧಾನ ಮಾಡುವುದೇ ಕಗ್ಗಾಂಟಾಗಿ ಹೋಗಿದೆ.
ಈ ಮಧ್ಯೆ ಈ ಗೊಂದಲಮಯ ವಾತಾವರಣದಲ್ಲಿ ಸರ್ಕಾರ ಹೆಚ್ಚು ದಿನ ಇರಲಾರದು ಎಂದು ಭಾವಿಸಿರುವ ಕೆಲವು ಮುಖಂಡರು ಈಗಾಗಲೇ ಬಿಜೆಪಿ ಸಂಪರ್ಕದಲ್ಲಿ ಇದ್ದು ಅತಂತ್ರ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುವ ಬದಲು ಬಿಜೆಪಿಗೆ ಹೋಗುವುದೇ ಒಳ್ಳೆಯದು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ಪ್ರಯತ್ನ ಮಾಡಿದರೆ ಸರ್ಕಾರ ರಚಿಸುವುದು ಕಷ್ಟವೇನಲ್ಲ. ಆದರೆ ಬಿಜೆಪಿಯ ಆಪರೇಷನ್ ಕಮಲಕ್ಕೆ ಕೈ ಹಾಕದೆ ಮೌನಕ್ಕೆ ಶರಣಾಗಿದೆ. ಅವರಾಗಿ ಬರಲಿ ಎಂಬುದು ಬಿಜೆಪಿಯ ಮೌನಕ್ಕೆ ಕಾರಣವಿರಬಹುದು. ಬಿಜೆಪಿಯ ನಡಿಗೆಯು ನಿಗೂಢವಾಗಿದೆ.
ಅಧಿಕಾರಕ್ಕಾಗಿ ಕಿತ್ತಾಡಿಕೊಂಡು ಸರ್ಕಾರ ಮಾಡುವುದನ್ನು ಜನರೇ ನೋಡಿ ರೋಸಿ ಹೋಗುತ್ತಾರೆ ಹಾಗೆ ಆದರೆ ಬಿಜೆಪಿಗೇ ಲಾಭ ಎನ್ನುವುದನ್ನು ಅರ್ಥಮಾಡಿಕೊಂಡಿರುವ ಬಿಜೆಪಿ ಹೈ ಕಮಾಂಡ್​ ಯಾವುದೇ ಕಾರಣಕ್ಕೂ ತಾವಾಗಿಯೇ ಬರುವವರೆವಿಗೂ ಯಾರನ್ನು ಆಪರೇಷನ್​ ಮಾಡದಂತೆ ಎಚ್ಚರಿಕೆ ನೀಡಿದೆ.

ಒಂದೊಮ್ಮೆ ಯಾರಿಗೂ ಬಹುಮತ ಬಂದಿಲ್ಲ ಎಂದು ವಿಧಾನಸಭೆಯನ್ನು ವಿಸರ್ಜನೆ ಮಾಡಿದರೂ ಕೂಡ ಈ ಬಾರಿ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ಮತ್ತೆ ಅಧಿಕಾರಕ್ಕೆ ಬಿಜೆಪಿಯೇ ಬರಲಿದೆ ಎನ್ನುವ ಲೆಕ್ಕಚಾರವಿರುವ ಕಾರಣದಿಂದಾಗಿ ಬಿಜೆಪಿ ಕಾಂಗ್ರಸ್​ ಮತ್ತು ಜೆಡಿಎಸ್​ ನಾಯಕರ ಕಿತ್ತಾಟನ್ನ ಮನರಂಜನೆಯಾಗಿ ವೀಕ್ಷಿಸುತ್ತಿದೆ.

ಕೆಲವೇ ದಿನಗಳಲ್ಲಿ ಅತೃಪ್ತರು ಕಾಂಗ್ರೆಸ್​ ಮತ್ತು ಜೆಡಿಎಸ್​ ಪಾಲಿಗೆ ಕಂಟಕವಾಗಲಿದ್ದು ಆಗ ಬಿಜೆಪಿಗೆ ಬರುವ ಶಾಸಕರನ್ನುಟ್ಟುಕೊಂಡು ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡುವುದಕ್ಕೆ ಬಿಜೆಪಿ ಚಿಂತನೆ ನಡೆಸಿದ್ದು, ಬಿಎಸ್​ವೈ ಮತ್ತೆ ಮುಖ್ಯಮಂತ್ರಿಯಾಗುವ ಖುಷಿಯಲ್ಲಿದ್ದಾರೆ ಎಂದು ಬಿಜೆಪಿ ಮೂಲಗಳ ಮಾತಾಗಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago