ಮಂಗಳೂರು,: ಮಹಿಳಾ ಸಿಬ್ಬಂದಿಗಳು ಹೆಚ್ಚಾಗಿರುವ ಕಚೇರಿಗಳಲ್ಲಿ ಮಹಿಳೆಯರಿಗೆ ಕಿರುಕುಳ ಉಂಟಾದರೆ ಜಿಲ್ಲಾ ಮಟ್ಟದ ಸ್ಥಳೀಯ ದೂರು ಸಮಿತಿಗೆ ದೂರು ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಎಸ್ ಕುಂದರ್ ಸೂಚಿಸಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನಲ್ಲಿ “ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ” ಕುರಿತು ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಭೆಯನ್ನುದ್ಧೇಶಿಸಿ ಮಾತನಾಡಿದರು.
ಸಖಿ ಕೇಂದ್ರದಲ್ಲಿ ಒಂದೇ ಸೂರಿನಡಿ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಕಾನೂನು ನೆರವು, ಪೊಲೀಸ್ ನೆರವು, ತಾತ್ಕಾಲಿಕ ಆಶ್ರಯಗಳನ್ನು ಒದಗಿಸಲಾಗುತ್ತಿದೆ. ಸಖಿ ಕೇಂದ್ರದ ಸ್ವಂತ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು, ಕಟ್ಟಡವು ಇಲಾಖೆಗೆ ಹಸ್ತಾಂತರಗೊಂಡ ಕೂಡಲೇಉದ್ಘಾಟನೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದರು.
ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ 2013 ರಡಿ 10 ಕ್ಕಿಂತಕಡಿಮೆ ಮಹಿಳಾ ಉದ್ಯೋಗಿಗಳು ಇರುವ ಸರ್ಕಾರಿ, ಖಾಸಗಿ ಕಛೇರಿಗಳು, ನಿಗಮ, ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ ಎಲ್ಲಾ ಕಛೇರಿಗಳಲ್ಲೂ ಕಡ್ಡಾಯವಾಗಿ ಆಂತರಿಕ ದೂರು ಸಮಿತಿಯನ್ನು ರಚಿಸುವಂತೆ ತಿಳಿಸಿದರು.
ಜಿಲ್ಲಾ ಲೇಡಿಗೋಶನ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ(ಒಎಸ್‍ಸಿ) ಕೇಂದ್ರಕ್ಕೆ ಭೇಟಿ ನೀಡಿ ದಾಖಲಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ಪಡೆದ ಅವರು, ಸಂತ್ರಸ್ಥ ಮಹಿಳೆಯನ್ನು ಭೇಟಿ ಮಾಡಿ, ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಲೇಡಿಗೋಶನ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಶಕುಂತಲಾ ಎಂ.ಎಂ, ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿಯ ಇಲಾಖೆಯ ಉಪನಿರ್ದೇಶಕ ಪಾಪಭೋವಿ, ಸಖಿ ಕೇಂದ್ರದ ಸೆಂಟರ್ ಅಡ್ಮಿನಿಸ್ಟ್ರೇಟರ್, ಮತ್ತಿತರರು ಉಪಸ್ಥಿತರಿದ್ಧರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…