ಉಡುಪಿ: ಸರಕಾರಿ ಉದ್ಯೋಗದಲ್ಲಿರುವ ಅಧಿಕಾರಿಗಳು ಸೇವೆಯ ನಿಮಿತ್ತ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು , ಕಡೆಗಣಿಸುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘ, ಮುನಿಯಾಲು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಎನ್‌ಎಸ್‌ಎಸ್ ಘಟಕ, ಜಿಲ್ಲಾ ರಕ್ತ ನಿಧಿ ಸಹಯೋಗದಲ್ಲಿ ಬುಧವಾರ ಮಿಷನ್ ಕಂಪೌಂಡ್ ಸಮೀಪ ಆಯೋಜಿಸಿದ್ದ 5ನೇ ವರ್ಷದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ದಾನದಲ್ಲಿ ಅತ್ಯಂತ ಶ್ರೇಷ್ಠ ರಕ್ತದಾನ. ನಾವು ಮಾಡುವ ರಕ್ತದಾನ ಇನ್ನೊಬ್ಬರ ಜೀವವನ್ನು ಉಳಿಸುತ್ತದೆ. ಜಿಲ್ಲೆಯಲ್ಲಿ ರಕ್ತದಾನದ ಕುರಿತು ಸಾಕಷ್ಟು ಅರಿವು ಇದೆ. ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ರಕ್ತವನ್ನು ಸಂಗ್ರಹಿಸುವ ಜಿಲ್ಲೆಯಾಗಿ ಗುರುತಿಸಿಕೊಂಡಿದೆ. ಗ್ರಾಮ ಲೆಕ್ಕಾಧಿಕಾರಿಗಳು ಇಂತಹ ಸಮಾಜಮುಖೀ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಉಡುಪಿ ತಾಲೂಕು ತಹಶಿಲ್ದಾರ್ ಪ್ರದೀಪ್ ಎಸ್. ಕುರುಡೇಕರ್, ಕಾಪು ತಾಲೂಕು ತಹಶೀಲ್ದಾರ್ ಮಹಮ್ಮದ್ ಇಸಾಕ್, ಜಿಲ್ಲಾಸ್ಪತ್ರೆ ಅಜ್ಜರಕಾಡು ರಕ್ತನಿಧಿ ವೈದ್ಯಾಧಿಕಾರಿ ಡಾ| ವೀಣಾ ಕುಮಾರಿ ಎಂ., ಮುನಿಯಾಲು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಸತ್ಯನಾರಾಯಣ ಬಿ. ಉಪಸ್ಥಿತರಿದ್ದರು. ಗ್ರಾಮಲೆಕ್ಕಾಧಿಕಾರಿಗಳ ಸಂಘದ ತಾಲೂಕು ಕಾರ್ಯದರ್ಶಿ ಕಾರ್ತಿಕೇಯ ಭಟ್ ವಂದಿಸಿದರು. ಮಾಳಪ್ಪ ಸ್ವಾಗತಿಸಿ ನಿರ್ವಹಿಸಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…