Featured

ಕಚೇರಿಗೆ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕಡೆಗಣಿಸುವುದು ಸರಿಯಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್‌ -Vishwanews24

ಉಡುಪಿ: ಸರಕಾರಿ ಉದ್ಯೋಗದಲ್ಲಿರುವ ಅಧಿಕಾರಿಗಳು ಸೇವೆಯ ನಿಮಿತ್ತ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು , ಕಡೆಗಣಿಸುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು.

ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘ, ಮುನಿಯಾಲು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಎನ್‌ಎಸ್‌ಎಸ್‌ ಘಟಕ, ಜಿಲ್ಲಾ ರಕ್ತ ನಿಧಿ ಸಹಯೋಗದಲ್ಲಿ ಬುಧವಾರ ಮಿಷನ್‌ ಕಂಪೌಂಡ್‌ ಸಮೀಪ ಆಯೋಜಿಸಿದ್ದ 5ನೇ ವರ್ಷದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ದಾನದಲ್ಲಿ ಅತ್ಯಂತ ಶ್ರೇಷ್ಠ ರಕ್ತದಾನ. ನಾವು ಮಾಡುವ ರಕ್ತದಾನ ಇನ್ನೊಬ್ಬರ ಜೀವವನ್ನು ಉಳಿಸುತ್ತದೆ. ಜಿಲ್ಲೆಯಲ್ಲಿ ರಕ್ತದಾನದ ಕುರಿತು ಸಾಕಷ್ಟು ಅರಿವು ಇದೆ. ರಾಜ್ಯದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ರಕ್ತವನ್ನು ಸಂಗ್ರಹಿಸುವ ಜಿಲ್ಲೆಯಾಗಿ ಗುರುತಿಸಿಕೊಂಡಿದೆ. ಗ್ರಾಮ ಲೆಕ್ಕಾಧಿಕಾರಿಗಳು ಇಂತಹ ಸಮಾಜಮುಖೀ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಉಡುಪಿ ತಾಲೂಕು ತಹಶಿಲ್ದಾರ್‌ ಪ್ರದೀಪ್‌ ಎಸ್‌. ಕುರುಡೇಕರ್‌, ಕಾಪು ತಾಲೂಕು ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌, ಜಿಲ್ಲಾಸ್ಪತ್ರೆ ಅಜ್ಜರಕಾಡು ರಕ್ತನಿಧಿ ವೈದ್ಯಾಧಿಕಾರಿ ಡಾ| ವೀಣಾ ಕುಮಾರಿ ಎಂ., ಮುನಿಯಾಲು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಸತ್ಯನಾರಾಯಣ ಬಿ. ಉಪಸ್ಥಿತರಿದ್ದರು. ಗ್ರಾಮಲೆಕ್ಕಾಧಿಕಾರಿಗಳ ಸಂಘದ ತಾಲೂಕು ಕಾರ್ಯದರ್ಶಿ ಕಾರ್ತಿಕೇಯ ಭಟ್‌ ವಂದಿಸಿದರು. ಮಾಳಪ್ಪ ಸ್ವಾಗತಿಸಿ ನಿರ್ವಹಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago