Featured

ಕಟಪಾಡಿಯ ಮಸೀದಿಯಲ್ಲಿ ಸಿಡಿಯಿತು ಗುಂಡು ; ಕಮೀಟಿ ಅಧ್ಯಕ್ಷ ಹುದ್ದೆಗಾಗಿ ಬಡಿದಾಟ

ಉಡುಪಿ : ಕಟಪಾಡಿ ಜಮಾಅತ್ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ಉಂಟಾಗಿ ವ್ಯಕ್ತಿಯೋರ್ವ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.

ಘಟನೆಯ ವಿವರ

ಕಟಪಾಡಿ ಜಮಾಅತ್‌ಗೆ ಇತ್ತೀಚೆಗೆ ಅಧ್ಯಕ್ಷರ ಆಯ್ಕೆ ನಡೆದಿದ್ದು, ಅದರಂತೆ ಕೆ.ಪಿ.ಎಚ್.ಇಸ್ಮಾಯೀಲ್ ಎಂಬವರು ಸರ್ವಾನುಮತದಿಂದ ಆಯ್ಕೆಗೊಂಡಿ ದ್ದರು. ಆದರೆ ಇದನ್ನು ವಿರೋಧಿಸಿದ್ದ ಸರಕಾರಿ ಗುಡ್ಡೆಯ ಅಕ್ಬರ್ ಎಂಬಾತ ಇಸ್ಮಾಯೀಲ್‌ಗೆ ದೂರವಾಣಿ ಕರೆ ಮಾಡಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬೆದರಿಕೆಯೊಡ್ಡಿದ್ದನೆನ್ನಲಾಗಿದೆ. ಈ ವಿಚಾರವನ್ನು ಇಸ್ಮಾಯೀಲ್‌ ಜಮಾಅತ್ ಮುಂದಿಟ್ಟಿದ್ದರು. ಕಳೆದ ಶುಕ್ರವಾರ ಈ ಬಗ್ಗೆ ಮಾತುಕತೆ ನಡೆದು ಇಸ್ಮಾಯೀಲ್‌ರನ್ನೇ ಅಧ್ಯಕ್ಷರನ್ನಾಗಿ ಮುಂದುವರಿಸಲು ಸಭೆ ತಿರ್ಮಾನಿಸಲಾಯಿತು. ಈ ಸಂದರ್ಭ ಅಕ್ಬರ್ ಕ್ಷಮೆ ಕೂಡಾ ಯಾಚಿಸಿದ್ದನೆನ್ನಲಾಗಿದೆ.

ಬಳಿಕ ಹಠಾತ್ ಬೆಳವಣಿಗೆಯೊಂದರಲ್ಲಿ ಇಸ್ಮಾಯೀಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಭೆಯಲ್ಲಿ ಅವರ ರಾಜೀನಾಮೆ ಅಂಗೀಕಾರ ದೊರೆತಿದ್ದು, ನೂತನ ಅಧ್ಯಕ್ಷರ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ ಅಕ್ಬರ್ ತನ್ನ ಆಪ್ತ ಹಮೀದ್ ಎಂಬರನ್ನು ಸೂಚಿಸಿದರೆನ್ನಲಾಗಿದೆ. ಇದಕ್ಕೆ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದ್ದು, ಅಧ್ಯಕ್ಷರ ಆಯ್ಕೆ ಮತದಾನದ ಮೂಲಕ ನಡೆಯಲಿ ಎಂದು ಪಟ್ಟು ಹಿಡಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಅಕ್ಬರ್ ತನ್ನಲ್ಲಿದ್ದ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಭಯದ ವಾತಾವರಣ ಸೃಷ್ಟಿಸಿದರೆನ್ನಲಾಗಿದೆ.

ಬಳಿಕ ನಡೆದ ತಳ್ಳಾಟದಲ್ಲಿ ಅಕ್ಬರ್ ಹಾಗೂ ಅನ್ವರ್ ಎಂಬವರು ಗಾಯಗೊಂಡಿದ್ದು, ಅವರು ಆಸ್ಪತ್ರೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago