ಕಾಪು: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿ, ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್. ನಗರ ನಿವಾಸಿ ಶೈನಾಜ್ (20) ಫೆ. 26 ರಿಂದ ನಾಪತ್ತೆಯಾಗಿದ್ದಾರೆ.
ಉಡುಪಿ ಕಾಲೇಜಿನಲ್ಲಿ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಶೈನಾಜ್ ಫೆ. 25 ರಂದು ರಾತ್ರಿ ತನ್ನ ಅಜ್ಜಿಯೊಂದಿಗೆ ಮಲಗಿದ್ದು ಮರುದಿನ ಬೆಳಿಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು.
ಈ ಬಗ್ಗೆ ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿ, ಉಡುಪಿ ಬಸ್ ನಿಲ್ದಾಣ, ಅಜ್ಜರಕಾಡು ಮಹಿಳಾ ಕಾಲೇಜು ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ಆಕೆಯ ತಾಯಿ ನೂರ್ ಜಹಾನ್ ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಶೈನಾಜ್ 20 ವರ್ಷ ಪ್ರಾಯದವರಾಗಿದ್ದು 5 ಅಡಿ ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಮನೆಯಿಂದ ತೆರಳುವಾಗ ನೇವಿ ಬ್ಲೂ ಬಣ್ಣದ ಬುರ್ಕಾ ಧರಿಸಿದ್ದಳು. ಕನ್ನಡ, ತುಳು, ಹಿಂದಿ, ಉರ್ದು ಭಾಷೆ ಬಲ್ಲವಳಾಗಿದ್ದು ಈಕೆಯನ್ನು ಗುರುತಿಸಿದವರು ಕಾಪು ಪೊಲೀಸ್ ಠಾಣೆ 0820-2551033 ಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…