Featured

ಕಟಪಾಡಿ ಗ್ರಾ.ಪಂ. ವ್ಯಾಪ್ತಿಯ ಅನ್ಯ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ; ಯುವ ಜನತೆಯ ಒಲವು ಬಿಜೆಪಿಯತ್ತ : ಕುಯಿಲಾಡಿ ಸುರೇಶ್ ನಾಯಕ್ -Vishwanews24

ಕಟಪಾಡಿ ಗ್ರಾ.ಪಂ. ವ್ಯಾಪ್ತಿಯ ಅನ್ಯ ಪಕ್ಷಗಳ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ;

ಯುವ ಜನತೆಯ ಒಲವು ಬಿಜೆಪಿಯತ್ತ : ಕುಯಿಲಾಡಿ ಸುರೇಶ್ ನಾಯಕ್

ಕಟಪಾಡಿ : ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಗಳು, ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿ ಪರ ಆಡಳಿತ ಹಾಗೂ ಸದೃಢ ಪಕ್ಷ ಸಂಘಟನೆಯಿಂದ ಇಂದು ಬಿಜೆಪಿ ಸರ್ವಸ್ಪರ್ಶಿ ಸರ್ವವ್ಯಾಪಿ ಎನಿಸಿದೆ. ಇದರ ಪರಿಣಾಮವಾಗಿ ಯುವ ಜನತೆಯ ಒಲವು ಬಿಜೆಪಿಯತ್ತ ಕೇಂದ್ರೀಕೃತವಾಗಿದೆ. ಪ್ರಸಕ್ತ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಗರಿಷ್ಠ ಅಂತರದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಕಾಪು ಮಂಡಲ ಕಛೇರಿಯಲ್ಲಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅನ್ಯ ಪಕ್ಷಗಳ ಕಾರ್ಯಕರ್ತರ ಬಿಜೆಪಿ ಸೇರ್ಪಡೆಗೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಪೂಜಾರಿ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ರಾಜೇಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago