ಕಟಪಾಡಿ : ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಗಳು, ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿ ಪರ ಆಡಳಿತ ಹಾಗೂ ಸದೃಢ ಪಕ್ಷ ಸಂಘಟನೆಯಿಂದ ಇಂದು ಬಿಜೆಪಿ ಸರ್ವಸ್ಪರ್ಶಿ ಸರ್ವವ್ಯಾಪಿ ಎನಿಸಿದೆ. ಇದರ ಪರಿಣಾಮವಾಗಿ ಯುವ ಜನತೆಯ ಒಲವು ಬಿಜೆಪಿಯತ್ತ ಕೇಂದ್ರೀಕೃತವಾಗಿದೆ. ಪ್ರಸಕ್ತ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿ ಗರಿಷ್ಠ ಅಂತರದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಕಾಪು ಮಂಡಲ ಕಛೇರಿಯಲ್ಲಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅನ್ಯ ಪಕ್ಷಗಳ ಕಾರ್ಯಕರ್ತರ ಬಿಜೆಪಿ ಸೇರ್ಪಡೆಗೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಪೂಜಾರಿ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ರಾಜೇಶ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…