Featured

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ – vishwanews24

ಕಟಪಾಡಿ ಪಳ್ಳಿಗುಡ್ಡೆ ಮೈದಾನ ತೆರವಿಗೆ ಕ್ರಮ ಕೈಗೊಳ್ಳಲು ಆಗ್ರಹ

ಉಡುಪಿ : ಕಾಪು ತಾಲೂಕು ಕೋಟೆ ಗ್ರಾಪಂ ವ್ಯಾಪ್ತಿಯಲ್ಲಿರುವ ಒಟ್ಟು ಸುಮಾರು 6.96ಎಕರೆ ಸರಕಾರಿ ಭೂಮಿಯನ್ನು ಖಾಸಗೀ ಶಿಕ್ಷಣ ಸಂಸ್ಥೆಯಾದ ಕಟಪಾಡಿ ಎಸ್‌ವಿಎಸ್ ಹೈಸ್ಕೂಲ್ ಹೆಸರಿನಲ್ಲಿ ಪಹಣಿ ಕಲಂ 11ರಲ್ಲಿ ಎಲಿನೇಶನ್ ಮಾಡಿದ್ದು, ಅದನ್ನು ಆ ಸಂಸ್ಥೆ ದುರುಪಯೋಗ ಪಡಿಸಿ ಕೊಳ್ಳುತ್ತಿದೆ. ಆದ್ದರಿಂದ ಅದನ್ನು ಸಾರ್ವಜನಿಕರ ಬಳಕೆಗೆ ತೆರವುಗೊಳಿಸಬೇಕು ಎಂದು ಗ್ರಾಮಸ್ಥ ಪ್ರಭಾಕರ ಕೋಟ್ಯಾನ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‌ವಿಎಸ್ ಹೈಸ್ಕೂಲ್ ಕಟಪಾಡಿ ಎಂಬ ಖಾಸಗಿ ವಿದ್ಯಾಸಂಸ್ಥೆ ಸರಕಾರಿ ಜಾಗದಲ್ಲಿ ಆಟದ ಮೈದಾನವನ್ನು ಎಲಿನೇಶನ್ ಮೂಲಕ ಹೊಂದಿದ್ದು, ಇದೀಗ ಆಟದ ಮೈದಾನಕ್ಕೆ ಗೇಟು ಅಳವಡಿಸಿ, ಬೀಗ ಹಾಕಿದ್ದಾರೆ. ಅಲ್ಲದೇ ಇದಕ್ಕೆ ಎಸ್‌ವಿಎಸ್ ಕ್ರೀಡಾಂಗಣ ಎಂಬ ನಾಮಫಲಕವನ್ನೂ ಅಳವಡಿಸಿದ್ದಾರೆ ಎಂದು ದೂರಿದರು.

ಇದನ್ನೂ ಓದಿ :

ಹಲವು ದಶಕಗಳಿಂದ ಪಳ್ಳಿಗುಡ್ಡೆ ಮೈದಾನವೆಂದು ನಿತ್ಯ ಬಳಕೆಯಲ್ಲಿ, ನೆಹರೂ ಮೈದಾನವೆಂದು ಸಾರ್ವಜನಿಕ ವಾಗಿ ಕರೆಯಲ್ಪಡುತಿದ್ದ ಈ ಮೈದಾನ ಸಾರ್ವಜನಿಕರ ಬಳಕೆ, ಮಕ್ಕಳ ದೈನಂದಿನ ಆಟಕ್ಕೆ ಬಳಕೆಯಾಗುತ್ತಿತ್ತು. ಆದರೇ ಈಗ ಸಂಸ್ಥೆಯವರು ಮೈದಾನಕ್ಕೆ ಗೇಟು ಅಳವಡಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಟವಾ ಡಲು ಪ್ರತಿದಿನಕ್ಕೆ 3,000ರೂ.ಗಳನ್ನು ಅಕ್ರಮವಾಗಿ ವಸೂಲಿ ಮಾಡುತಿದ್ದಾರೆ. ಈ ದಂಧೆ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದೆ ಎಂದವರು ಆರೋಪಿಸಿದರು.

ಅಲ್ಲದೇ ಸರಕಾರಿ ಜಾಗದಲ್ಲಿ ಬೇರೆ ಬೇರೆ ಕಟ್ಟಡಗಳನ್ನು, ವೇದಿಕೆಯನ್ನು ನಿರ್ಮಿಸಲು ಮುಂದಾಗಿದ್ದು, ಗ್ರಾಮಪಂಚಾಯತ್ ಈಗಾಗಲೇ ಅದನ್ನು ತೆರವು ಗೊಳಿಸುವಂತೆ ನಿರ್ಣಯ ತೆಗೆದುಕೊಂಡು ನೋಟೀಸು ನೀಡಿದ್ದರೂ ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಪ್ರಭಾಕರ ಕೋಟ್ಯಾನ್ ತಿಳಿಸಿದರು.

ಈ ಮೈದಾನವನ್ನು ಕಾಪು ತಾಲೂಕಿನ ‘ತಾಲೂಕು ಕ್ರೀಡಾಂಗಣ’ವಾಗಿ ಘೋಷಿಸಿ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು. 10 ದಿನದೊಳಗೆ ಮೈದಾನಕ್ಕೆ ಹಾಕಿರುವ ಬೀಗವನ್ನು ತೆರವುಗೊಳಿಸದಿದ್ದರೆ, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆ ಹಮ್ಮಿ ಕೊಳ್ಳಲಾಗುವುದು ಎಂದವರು ಎಚ್ಚರಿಸಿದ್ದಾರೆ. ಗ್ರಾಮಸ್ಥ ಶೈಲೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ :

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

12 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

13 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

13 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

15 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

16 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

16 hours ago