ಕಟಪಾಡಿ: ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್  – Vishwanews24

Featured, ಉಡುಪಿ

ಕಟಪಾಡಿ : ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ 

ಕಾಪು : ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಸಾವನ್ನಪ್ಪಿ, ಸವಾರ ಗಾಯಗೊಂಡ ಘಟನೆ ನಡೆದಿದೆ.

ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.

ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್‌ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್‌ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.

ಕಟಪಾಡಿ: ರಸ್ತೆ ಬ್ಯಾರಿಕೆಡ್ ಗೆ ಬೈಕ್ ಡಿಕ್ಕಿ ; ನಿಶ್ಚಿತಾರ್ಥವಾಗಿದ್ದ ಯುವತಿ ಸ್ಥಳದಲ್ಲೇ ಮೃತ್ಯು – Vishwanews24

ಇನ್ನು ಬಸ್ಸು ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ನೋವಿನಿಂದ ಅತ್ತಿತ್ತ ವಾಲಾಡಿದ್ದು ಸ್ಕೂಟರ್‌ ನನ್ನ ನಿಯಂತ್ರಣ ತಪ್ಪಿ ಮುಂದೆ ರಾಷ್ಟ್ರೀಯ ಹೆದ್ದಾರಿ 66 ಕಾಮಗಾರಿ ನಡೆಯುತ್ತಿದ್ದ ಕಾರಣ ರಸ್ತೆಯ ಬಲಬದಿಗೆ ಅಡ್ಡವಿಟ್ಟಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಸ್ವಲ್ಪ ಮುಂದಕ್ಕೆ ಹೋಗಿ ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದ ಬಿದ್ದ ಪರಿಣಾಮ ರೋಶನಿ ತಲೆಗೆ ಪೆಟ್ಟಾಗಿದ್ದು ಬಾಯಲ್ಲಿ ರಕ್ತ ಬರುತ್ತಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಶನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸವಾರ ಪ್ರಥಮ ಚಿಕಿತ್ಸೆ ಪಡೆದು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಕಾಪು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 21/2023 ಕಲಂ: 279, 337, 304(ಎ) ಐಪಿಸಿ ಮತ್ತು 134 (ಎ) & (ಬಿ) ಐ.ಎಮ್.ವಿ. ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ; ಫೆ.16ರಂದು ಶ್ರೀ ದೇವರಿಗೆ ಸಮರ್ಪಣೆ – Vishwanews24

Leave a Reply