ಕಾಪು : ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಸಾವನ್ನಪ್ಪಿ, ಸವಾರ ಗಾಯಗೊಂಡ ಘಟನೆ ನಡೆದಿದೆ.
ಮೃತ ಯುವತಿಯನ್ನು ರೋಶನಿ ಡಿಸೋಜಾ ಎಂದು ಗುರುತಿಸಲಾಗಿದೆ.
ಉಡುಪಿ ಮಂಗಳೂರು ರಸ್ತೆಯಲ್ಲಿ ಮಂಗಳೂರು ಕಡೆಗೆ ರಸ್ತೆಯ ಬಲಬದಿಯಲ್ಲಿ ಡಿವೈಡರ್ ಪಕ್ಕದಲ್ಲಿ ಸ್ಕೂಟರ್ ಹೋಗುತ್ತಿದ್ದಾಗ ಉಡುಪಿ ಕಡೆಯಿಂದ ಬಂದ ಬಸ್ಸಿನ ಚಾಲಕನು ತನ್ನ ಬಸ್ಸನ್ನು ಅತೀ ವೇಗ ಹಾಗೂ ನಿಲ೯ಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ಎಡಬದಿಯಲ್ಲಿ ಹೋಗುತ್ತಿದ್ದು ಏಕಾಏಕಿಯಾಗಿ ಬಸ್ಸನ್ನು ರಸ್ತೆಯ ಬಲಬದಿಗೆ ಚಲಾಯಿಸಿಕೊಂಡು ಬಂದು ಸ್ಕೂಟರ್ ಹಿಂದೆ ಕುಳಿತಿದ್ದ ರೋಶನಿಯವರ ಎಡ ಕಾಲಿಗೆ ಬಸ್ಸಿನ ಹಿಂಬದಿ ಡಿಕ್ಕಿ ಹೊಡೆದು ಬಸ್ಸನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.
ಇನ್ನು ಬಸ್ಸು ರೋಶನಿಯ ಕಾಲಿಗೆ ಡಿಕ್ಕಿ ಹೊಡೆದ ಕಾರಣ ನೋವಿನಿಂದ ಅತ್ತಿತ್ತ ವಾಲಾಡಿದ್ದು ಸ್ಕೂಟರ್ ನನ್ನ ನಿಯಂತ್ರಣ ತಪ್ಪಿ ಮುಂದೆ ರಾಷ್ಟ್ರೀಯ ಹೆದ್ದಾರಿ 66 ಕಾಮಗಾರಿ ನಡೆಯುತ್ತಿದ್ದ ಕಾರಣ ರಸ್ತೆಯ ಬಲಬದಿಗೆ ಅಡ್ಡವಿಟ್ಟಿದ್ದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಸ್ವಲ್ಪ ಮುಂದಕ್ಕೆ ಹೋಗಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಬಿದ್ದ ಪರಿಣಾಮ ರೋಶನಿ ತಲೆಗೆ ಪೆಟ್ಟಾಗಿದ್ದು ಬಾಯಲ್ಲಿ ರಕ್ತ ಬರುತ್ತಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರೋಶನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸವಾರ ಪ್ರಥಮ ಚಿಕಿತ್ಸೆ ಪಡೆದು ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಕಾಪು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 21/2023 ಕಲಂ: 279, 337, 304(ಎ) ಐಪಿಸಿ ಮತ್ತು 134 (ಎ) & (ಬಿ) ಐ.ಎಮ್.ವಿ. ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…