ಕಾಪು: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವತಿ ಮಂಗಳೂರಿನ ರೋಶ್ನಿ ಡಿಸೋಜ (27) ಎಂದು ತಿಳಿದುಬಂದಿದೆ.
ರೋಶ್ನಿ ತನಗೆ ಮದುವೆ ನಿಶ್ಚಯವಾಗಿದ್ದ ಜೋಯಲ್ ಎಂಬವರ ಜೊತೆ ಮಂಗಳೂರಿನಿಂದ ಕಲ್ಮಾಡಿ ಚರ್ಚ್ ಗೆ ಭೇಟಿ ನೀಡಿ ಹಿಂದಕ್ಕೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ.
ಮೂಡುಬೆಟ್ಟು ಅಂಬಿಕಾ ಟಿಂಬರ್ ಬಳಿ ಹಾಕಲಾಗಿದ್ದ ಬ್ಯಾರಿಕೆಡ್ ಗೆ ಡಿಕ್ಕಿ ಹೊಡೆದು ಬೈಕ್ ಉರುಳಿ ಬಿದ್ದಿತ್ತು. ಇದರಿಂದ ಬೈಕ್ ನಿಂದ ಎಸೆಯಲ್ಪಟ್ಟ ರೋಶ್ನಿ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಯಿತದರೂ ಅದಾಗಲೇ ರೋಶ್ನಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪರಾಗಿದ್ದಾಗಿ ಕಾಪು ಪೊಲೀಸರು ತಿಳಿಸಿದ್ದಾರೆ.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…