ಉಡುಪಿ : ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾ.ಹೆ. 66 ರ ಕಟಪಾಡಿ ಜಂಕ್ಷನ್ನಲ್ಲಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವವರೆಗೆ ಸದ್ರಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡoತೆ ಪರ್ಯಾಯ ಮಾರ್ಗದ ರಸ್ತೆಯ ಮೂಲಕ ವಾಹನ ಸಂಚರಿಸಲು ವ್ಯವಸ್ಥೆ ಮಾಡಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಘನ ಹಾಗೂ ಇತರೆ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರಾö್ಯಕ್ನಲ್ಲಿ ಸಾಗಬೇಕು. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುವ ಘನ ಹಾಗೂ ಇತರ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರಾö್ಯಕ್ನಲ್ಲಿ ಸಾಗಬೇಕು.
ಮಂಗಳೂರಿನಿoದ ಉಡುಪಿ ಕಡೆಗೆ ಸಾಗುವ ಎಕ್ಸ್ಪ್ರೆಸ್ ಹಾಗೂ ಶಟಲ್ ಬಸ್ಗಳು, ಇತರ ಖಾಸಗಿ ವಾಹನಗಳು ಮತ್ತು ಸಾರ್ವಜನಿಕ ವಾಹನಗಳು ಕಲ್ಲಾಪು ಮೂಲಕ ಕಟಪಾಡಿ ಪೇಟೆಗೆ ಬಂದು ಜನರನ್ನು ಇಳಿಸಿ/ ಹತ್ತಿಸಿಕೊಂಡು ಫಾರೆಸ್ಟ್ ಗೇಟ್ ಮೂಲಕ ರಾಷ್ಟ್ರೀಯ ಹೆದ್ದಾರಿ 66 ನ್ನು ಸೇರಬೇಕು.
ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ಘನ ವಾಹನಗಳು/ ಟ್ರಕ್ಗಳು ಮೂಡುಬೆಳ್ಳೆ-ದೆಂದೂರುಕಟ್ಟೆ-ಅಲೆವೂರು ಮಾರ್ಗವಾಗಿ ಉಡುಪಿಯನ್ನು ಸೇರಿಕೊಳ್ಳಬೇಕು.
ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ದ್ವಿಚಕ್ರ, ತ್ರಿಚಕ್ರ ಮತ್ತು ಲಘು ವಾಹನಗಳು ಉಡುಪಿ-ಮಂಗಳೂರು ಸರ್ವೀಸ್ ರಸ್ತೆಯಲ್ಲಿ ಸಾಗಿ ಮುಂದೆ ರಾಷ್ಟ್ರೀಯ ಹೆದ್ದಾರಿಯ ಮಂಗಳೂರು-ಉಡುಪಿ ರಸ್ತೆ ಸೇರಲು ತೆರೆಯುವ ಮೀಡಿಯನ್ನಲ್ಲಿ ಹೆದ್ದಾರಿ ಪ್ರವೇಶಿಸಿ, ಉಡುಪಿಗೆ ತೆರಳಬೇಕು.
ಮಟ್ಟು ಕಡೆಯಿಂದ ಉಡುಪಿ ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕ ಫಾರೆಸ್ಟ್ ಗೇಟ್ ಬಳಿ ತಲುಪಿ ಮಂಗಳೂರು-ಉಡುಪಿ ಹೆದ್ದಾರಿಯನ್ನು ಸೇರಿ ಉಡುಪಿ ಕಡೆಗೆ ತೆರಳಬೇಕು.
ಮಟ್ಟು ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕವಾಗಿ ಫಾರೆಸ್ಟ್ ಗೇಟ್ ಬಳಿ ತಲುಪಿ ಇಲ್ಲಿ ತೆರೆದಿರುವ ಮೀಡಿಯನ್ ಮೂಲಕ ಉಡುಪಿ-ಮಂಗಳೂರು ಹೆದ್ದಾರಿ ಸರ್ವೀಸ್ ರಸ್ತೆಯನ್ನು ಸೇರಿ ಮಂಗಳೂರು ಕಡೆಗೆ ತೆರಳಬೇಕು.
ಮಂಗಳೂರು ವಿಮಾನ ನಿಲ್ದಾಣಕ್ಕೆ ತುರ್ತು ಹೋಗುವ ವಾಹನಗಳು ಕಟಪಾಡಿ ಮಾರ್ಗವನ್ನು ಹೊರತುಪಡಿಸಿ ಬೇರೆ ರಸ್ತೆ/ ಮಾರ್ಗದಲ್ಲಿ ಸಾಗುವುದಕ್ಕೆ ಪ್ರಾಶಸ್ತö್ಯ ನೀಡುವುದು. ಕಾಮಗಾರಿ ನಡೆಯುವ ಸ್ಥಳದಿಂದ ಮಂಗಳೂರು ರಸ್ತೆ, ಉಡುಪಿ ರಸ್ತೆ, ಮಟ್ಟು ರಸ್ತೆ ಹಾಗೂ ಶಿರ್ವಾ ರಸ್ತೆಯಲ್ಲಿ 100 ಮೀ. ದೂರದವರೆಗೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…