Featured

ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ – vishwanews24

ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಉಡುಪಿ :  ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾ.ಹೆ. 66 ರ ಕಟಪಾಡಿ ಜಂಕ್ಷನ್‌ನಲ್ಲಿ ವೆಹಿಕಲ್ ಓವರ್ ಪಾಸ್ ನಿರ್ಮಾಣ ಕಾಮಗಾರಿಯು ಪೂರ್ಣಗೊಳ್ಳುವವರೆಗೆ ಸದ್ರಿ ರಾಷ್ಟ್ರೀಯ ಹೆದ್ದಾರಿಯ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಈ ಕೆಳಕಂಡoತೆ ಪರ್ಯಾಯ ಮಾರ್ಗದ ರಸ್ತೆಯ ಮೂಲಕ ವಾಹನ ಸಂಚರಿಸಲು ವ್ಯವಸ್ಥೆ ಮಾಡಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಘನ ಹಾಗೂ ಇತರೆ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರಾö್ಯಕ್‌ನಲ್ಲಿ ಸಾಗಬೇಕು. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುವ ಘನ ಹಾಗೂ ಇತರ ಸರಕು ಸಾಗಾಟ ವಾಹನಗಳು ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ನಿಗಧಿಪಡಿಸಿದ ಟ್ರಾö್ಯಕ್‌ನಲ್ಲಿ ಸಾಗಬೇಕು.

ಮಂಗಳೂರಿನಿoದ ಉಡುಪಿ ಕಡೆಗೆ ಸಾಗುವ ಎಕ್ಸ್ಪ್ರೆಸ್ ಹಾಗೂ ಶಟಲ್ ಬಸ್‌ಗಳು, ಇತರ ಖಾಸಗಿ ವಾಹನಗಳು ಮತ್ತು ಸಾರ್ವಜನಿಕ ವಾಹನಗಳು ಕಲ್ಲಾಪು ಮೂಲಕ ಕಟಪಾಡಿ ಪೇಟೆಗೆ ಬಂದು ಜನರನ್ನು ಇಳಿಸಿ/ ಹತ್ತಿಸಿಕೊಂಡು ಫಾರೆಸ್ಟ್ ಗೇಟ್ ಮೂಲಕ ರಾಷ್ಟ್ರೀಯ ಹೆದ್ದಾರಿ 66 ನ್ನು ಸೇರಬೇಕು.

ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ಘನ ವಾಹನಗಳು/ ಟ್ರಕ್‌ಗಳು ಮೂಡುಬೆಳ್ಳೆ-ದೆಂದೂರುಕಟ್ಟೆ-ಅಲೆವೂರು ಮಾರ್ಗವಾಗಿ ಉಡುಪಿಯನ್ನು ಸೇರಿಕೊಳ್ಳಬೇಕು.

ಶಿರ್ವದಿಂದ ಉಡುಪಿ ಕಡೆಗೆ ಸಂಚರಿಸುವ ದ್ವಿಚಕ್ರ, ತ್ರಿಚಕ್ರ ಮತ್ತು ಲಘು ವಾಹನಗಳು ಉಡುಪಿ-ಮಂಗಳೂರು ಸರ್ವೀಸ್ ರಸ್ತೆಯಲ್ಲಿ ಸಾಗಿ ಮುಂದೆ ರಾಷ್ಟ್ರೀಯ ಹೆದ್ದಾರಿಯ ಮಂಗಳೂರು-ಉಡುಪಿ ರಸ್ತೆ ಸೇರಲು ತೆರೆಯುವ ಮೀಡಿಯನ್‌ನಲ್ಲಿ ಹೆದ್ದಾರಿ ಪ್ರವೇಶಿಸಿ, ಉಡುಪಿಗೆ ತೆರಳಬೇಕು.

ಮಟ್ಟು ಕಡೆಯಿಂದ ಉಡುಪಿ ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕ ಫಾರೆಸ್ಟ್ ಗೇಟ್ ಬಳಿ ತಲುಪಿ ಮಂಗಳೂರು-ಉಡುಪಿ ಹೆದ್ದಾರಿಯನ್ನು ಸೇರಿ ಉಡುಪಿ ಕಡೆಗೆ ತೆರಳಬೇಕು.

ಮಟ್ಟು ಕಡೆಯಿಂದ ಮಂಗಳೂರು ಕಡೆಗೆ ಸಾಗುವ ಲಘು ವಾಹನಗಳು ಕಟಪಾಡಿ ಹಳೇ ರಸ್ತೆ ಮೂಲಕವಾಗಿ ಫಾರೆಸ್ಟ್ ಗೇಟ್ ಬಳಿ ತಲುಪಿ ಇಲ್ಲಿ ತೆರೆದಿರುವ ಮೀಡಿಯನ್ ಮೂಲಕ ಉಡುಪಿ-ಮಂಗಳೂರು ಹೆದ್ದಾರಿ ಸರ್ವೀಸ್ ರಸ್ತೆಯನ್ನು ಸೇರಿ ಮಂಗಳೂರು ಕಡೆಗೆ ತೆರಳಬೇಕು.

ಮಂಗಳೂರು ವಿಮಾನ ನಿಲ್ದಾಣಕ್ಕೆ ತುರ್ತು ಹೋಗುವ ವಾಹನಗಳು ಕಟಪಾಡಿ ಮಾರ್ಗವನ್ನು ಹೊರತುಪಡಿಸಿ ಬೇರೆ ರಸ್ತೆ/ ಮಾರ್ಗದಲ್ಲಿ ಸಾಗುವುದಕ್ಕೆ ಪ್ರಾಶಸ್ತö್ಯ ನೀಡುವುದು. ಕಾಮಗಾರಿ ನಡೆಯುವ ಸ್ಥಳದಿಂದ ಮಂಗಳೂರು ರಸ್ತೆ, ಉಡುಪಿ ರಸ್ತೆ, ಮಟ್ಟು ರಸ್ತೆ ಹಾಗೂ ಶಿರ್ವಾ ರಸ್ತೆಯಲ್ಲಿ 100 ಮೀ. ದೂರದವರೆಗೆ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

 

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

15 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

15 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

15 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

16 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

17 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

17 hours ago