Featured

ಕಟಪಾಡಿ: ಸಮಾಜ ಸಂಘಟಕ, ನಿವೃತ್ತ ಪ್ರೊ. ವಿ.ಕೆ. ಉದ್ಯಾವರ ಹೃದಯಾಘಾತದಿಂದ ನಿಧನ – vishwanews24

ಕಟಪಾಡಿ: ಸಮಾಜ ಸಂಘಟಕ, ನಿವೃತ್ತ ಪ್ರೊ. ವಿ.ಕೆ. ಉದ್ಯಾವರ ಹೃದಯಾಘಾತದಿಂದ ನಿಧನ

ಕಟಪಾಡಿ: ಸಮಾಜ ಸಂಘಟಕ, ನಿವೃತ್ತ ಪ್ರೊ. ವಿ.ಕೆ. ಉದ್ಯಾವರ (66) ಹೃದಯಾಘಾತದಿಂದ ಮಾ. 20 ರ ಗುರುವಾರ ನಿಧನ ಹೊಂದಿದರು.

ಉಡುಪಿ ಬೋರ್ಡ್ ಹೈಸ್ಕೂಲ್, ಗ್ರೀನ್ ಪಾರ್ಕ್ ಕಾಲೇಜ್, ಕಾಪು ವಿದ್ಯಾನಿಕೇತನ, ತ್ರಿಷಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಆಡಳಿತಾಧಿಕಾರಿಯಾಗಿ, ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿದ್ದರು.

ಮೂಲತಃ ಉದ್ಯಾವರ ಅಂಕುದ್ರು ನಿವಾಸಿ, ಪ್ರಸ್ತುತ ಮಣಿಪಾಲದಲ್ಲಿ ವಾಸ್ತವ್ಯ ಹೊಂದಿದ್ದರು.

ಉದ್ಯಾವರ ಯುವಕ ಮಂಡಲ, ಉದ್ಯಾವರ ಸಾರ್ವಜನಿಕ ಗಣೇಶೋತ್ಸವ ಸಹಿತ ಹತ್ತು ಹಲವು ಸಂಘಟನೆಗಳನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮಾಜಿ ಶಾಸಕ ಯು.ಆರ್. ಸಭಾಪತಿ ಅವರ ಆಪ್ತರಾಗಿದ್ದು, ಉತ್ತಮ ಮಾರ್ಗದರ್ಶಕರಾಗಿದ್ದು, ನಾಟಕ ರಂಗ ನಿರ್ದೇಶಕರಾಗಿ, ಕಲಾವಿದರಾಗಿ, ಸರಳತೆ, ಸಜ್ಜನಿಕೆಯಿಂದ ಜನಾನುರಾಗಿಯಾಗಿದ್ದರು. ಕಾಲೇಜು ವಿದ್ಯಾರ್ಥಿಗಳಿಗೆ ರಾಷ್ಟ್ರಭಕ್ತಿ, ಕೃಷಿ ಪ್ರೇಮ, ಸಹಿತ ಹಲವು ಸಮಾಜಮುಖಿ ಕಾರ್ಯಕ್ರಮವನ್ನು ನಡೆಸುವ ಮೂಲಕ ಜನಮನ್ನಣೆ ಗಳಿಸಿದ್ದರು.

ಸಾಮಾಜಿಕ ಕಾರ್ಯಕರ್ತ, ಉತ್ತಮ ವಾಗ್ಮಿ, ಸಮಾಜಮುಖಿ ಚಿಂತಕರಾಗಿದ್ದ ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ಅಪಾರ ಸಂಖ್ಯೆಯ ವಿದ್ಯಾರ್ಥಿ ಬಳಗ, ಬಂಧು- ಮಿತ್ರರನ್ನು ಅಗಲಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

12 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

12 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

13 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

13 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

13 hours ago