Featured

ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್‌‌ನ ಅಮೃತ ಮಹೋತ್ಸವ ; ಅದ್ದೂರಿ ಮೆರವಣಿಗೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆ – vishwanews24

ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್‌‌ನ ಅಮೃತ ಮಹೋತ್ಸವ ; ಅದ್ದೂರಿ ಮೆರವಣಿಗೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆ

ಉಡುಪಿ: ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್ ಇದರ ಅಮೃತಮಹೋತ್ಸವ ಆಚರಣೆಯ ಪ್ರಯುಕ್ತ ಪೂರ್ವಭಾವಿಯಾಗಿ ಶುಕ್ರವಾರ ಸಂಜೆ ಸರ್ವಧರ್ಮಿಯರ ಸಹಭಾಗಿತ್ವದಲ್ಲಿ ಹೊರೆಕಾಣಿಕೆ ಮೆರವಣಿಗೆ ಜರುಗಿತು.

ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಬಳಿಯಿಂದ ಹೊರಟು ಕಟಪಾಡಿ ಚರ್ಚ್ ವರೆಗೆ ನಡೆದ ಅದ್ದೂರಿ ಮೆರವಣಿಗೆ ಯಲ್ಲಿ ಹಸಿರು ಹೊರೆ ಕಾಣಿಕೆಯನ್ನು ಬ್ಯಾಂಡ್, ಚಂಡೆ ವಾದ್ಯಗಳೊಂದಿಗೆ ಶೋಭಾಯಾತ್ರೆಯಲ್ಲಿ ತರಲಾಯಿತು.

ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಸಮಾಜಸೇವಕ ರವಿ ಕಟಪಾಡಿ ಚಾಲನೆ ನೀಡಿ ಮಾತನಾಡಿ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿರುವ ತನಗೆ ನನ್ನ ಊರಿನಲ್ಲಿ ಈ ಅವಕಾಶ ನೀಡಿರುವುದು ನನ್ನ ಭಾಗ್ಯ. ಇರುವ ಒಂದು ಜೀವನವನ್ನು ಸಮಾಜದಲ್ಲಿನ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡುವಾಗ ಸಿಗುವ ಸಂತೃಪ್ತಿಗೆ ಬೆಲೆ ಕಟ್ಟಲಾಗದು. ನಾವೆಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಭಾವನೆಯೊಂದಿಗೆ ಬದುಕಿದಾಗ ಜೀವನ ಸಾರ್ಥಕವಾಗುತ್ತದೆ ಎಂದರು.

ಹೊರೆಕಾಣಿಕೆ ಮೆರವಣಿಗೆಯಲ್ಲಿ ಉಡುಪಿ ವಲಯದ ವಿವಿಧ ಚರ್ಚುಗಳು, ಕಟಪಾಡಿ ವಿಶ್ವನಾಥ ಕ್ಷೇತ್ರ, ಲಯನ್ಸ್ ಕ್ಲಬ್, ಮಣಿಪುರ ಸಿಎಸ್ಐ ಚರ್ಚು, ಕಟಪಾಡಿ ಚರ್ಚಿನ ವಿವಿಧ ವಾಳೆಗಳು, ನವೋದಯ ಸ್ವಸಹಾಯ ಸಂಘದ ಸದಸ್ಯರು ಹಸಿರು ಹೊರೆಕಾಣಿಕೆಯನ್ನು ಸಮರ್ಪಿಸಿದರು. ಹೊರೆಕಾಣಿಕೆ ಸಮರ್ಪಿಸಿದ ಚರ್ಚುಗಳು ಹಾಗೂ ಸಂಘಟನೆಯ ಸದಸ್ಯರನ್ನು ಚರ್ಚಿನಲ್ಲಿ ಗೌರವಿಸಲಾಯಿತು.

ಈ ವೇಳೆ ಉಡುಪಿ ವಲಯ ಪ್ರಧಾನ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕಟಪಾಡಿ ಚರ್ಚಿನ ಧರ್ಮಗುರು ವಂ|ರಾಜೇಶ್ ಪಸನ್ನಾ, ಕಟಪಾಡಿ ಹೋಲಿಕ್ರಾಸ್ ಸ್ಟೂಡೆಂಟ್ ಹೋಮ್ ಇದರ ನಿರ್ದೇಶಕರಾದ ವಂ|ರೋನ್ಸನ್ ಡಿಸೋಜಾ, ಮೂಡುಬೆಳ್ಳೆ ಚರ್ಚಿನ ವಂ|ಜೋರ್ಜ್ ಡಿಸೋಜಾ, ಕುಂತಲನಗರ ಚರ್ಚಿನ ವಂ|ವಿಲ್ಸನ್, ಉಡುಪಿ ಚರ್ಚಿನ ವಂ|ರೋಯ್ ಲೋಬೊ, ಕಟಪಾಡಿ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಬ್ರಾಯನ್ ಕೊರೆಯಾ, ಕಾರ್ಯದರ್ಶಿ ತೆರೆಸಾ ಲೋಬೊ, 20 ಆಯೋಗಗಳ ಸಂಚಾಲಕರಾಗಿ ಲುವಿಸ್ ಡಿಸಿಲ್ವಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago