ಉಡುಪಿ: ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ.
ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಕಟಿಸಿ ಗಮನ ಸೆಳೆದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.
ಇಂದು ಬೆಳ್ಳಂಬೆಳಗ್ಗೆ ರಸ್ತೆಯಲ್ಲಿದ್ದ ಹೊಂಡಕ್ಕೆ ಬಾಳೆ ಗಿಡ ನೆಟ್ಟು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸಂಸದರು ಶಾಸಕರು ಇತ್ತ ಕೂಡಲೇ ಗಮನಹರಿಸಿ, ಈ ರಸ್ತೆಯನ್ನು ಸರಿಪಡಿಸಬೇಕಾಗಿದೆ. ಈ ರಸ್ತೆಯ ಬಗ್ಗೆ ಸಾಂಗ್ ವೈರಲ್ ಆಗಿತ್ತು. ಬಾಳೆ ಗೊನೆಬಿಡುವ ಮೊದಲು ಲೋಕೋಪಯೋಗಿ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಈ ರಸ್ತೆ ದುರಸ್ತಿ ಮಾಡಲಿದೆಯೇ ಎಂಬುವುದನ್ನು ಕಾದು ನೋಡಬೇಕಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…