Featured

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ -Vishwanews24

ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಅವರು ಶಿಲ್ಪಾ ಶೆಟ್ಟಿ ಅವರಿಗೆ ದೇವರ ಶೇಷವಸ್ತ್ರ ನೀಡಿ ಗೌರವಿಸಿದರು. ಜೊತೆಗೆ ಮುಂದಿನ ವರ್ಷ ಜನವರಿಯಲ್ಲಿ ನಡೆಯುವ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬರುವಂತೆ ಕೋರಿ, ಆಮಂತ್ರಣ ಪತ್ರಿಕೆಯನ್ನು ನೀಡಿದರು.

ಆಮಂತ್ರಣ ಹಾಗೂ ವಿಶೇಷ ಗೌರವವನ್ನು ಸ್ವೀಕರಿಸಿದ ಶಿಲ್ಪಾ ಶೆಟ್ಟಿ ಅವರು, ಬ್ರಹ್ಮಕಲಶೋತ್ಸವಕ್ಕೆ ಬರುವುದಾಗಿ ತಿಳಿಸಿದ್ದಾರೆ.

ತಾಯ್ನುಡಿ ತುಳುವಿನಲ್ಲಿಯೇ ಮಾತು ಆರಂಭಿಸಿ, ಮಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನು ಇದಕ್ಕೂ ಮುನ್ನ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಂಸಿ ಆಸ್ಪತ್ರೆಯ ಮಾತೃತ್ವ ಮತ್ತು ಮಕ್ಕಳ ಆರೈಕೆಯ ನೂತನ ಘಟಕಕ್ಕೆ ಅವರು ಚಾಲನೆ ನೀಡಿದರು. ದ.ಕ. ಜಿಲ್ಲೆಯು ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದೆ. ಇಲ್ಲಿಗೆ ಬರಲು ನನಗೆ ಹೆಮ್ಮೆಯಾಗುತ್ತಿದೆ ಎಂದು ಶಿಲ್ಪ ಶೆಟ್ಟಿ ಹೇಳಿದ್ದಾರೆ.

ಮಾತೃತ್ವ ಮಹಿಳೆಯರ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಈ ವೇಳೆ ಉತ್ತಮ ವೈದ್ಯಕೀಯ ನೆರವು ಸಲಹೆ ಅಗತ್ಯ. ಅದಕ್ಕಾಗಿ ಕೆಎಂಸಿ ಆಸ್ಪತ್ರೆಯ ಈ ಘಟಕ ಸಹಕಾರಿಯಾಗಲಿದೆ ಎಂದವರು ಹೇಳಿದರು.

ಕಾರ್ಯಕ್ರಮದಲ್ಲಿ ಮಣಿಪಾಲ್ ವಿದ್ಯಾಸಂಸ್ಥೆ ಉಪ ಕುಲಪತಿ ಡಾ.ಎಚ್ ಎಸ್ ಬಲ್ಲಾಳ್, ಕೆಎಂಸಿ ಆಸ್ಪತ್ರೆಯ ರೀಜನಲ್ ಚೀಫ್ ಆಪರೇಟಿಂಗ್ ಆಫಿಸರ್ ಸಾಘಿರ್ ಸಿದ್ದಿಕಿ, ಮಣಿಪಾಲ್ ಹೆಲ್ತ್ ಎಂಟರ್ ಪ್ರೈಸಸ್ ಮುಖ್ಯಸ್ಥರಾದ ದಿಲಿಪ್ ಜೋಸೆ ಮತ್ತಿತರರು ಉಪಸ್ಥಿತರಿದ್ದರು.

 

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago