ಕಟೀಲು: ಕಟೀಲು ದೇವಸ್ಥಾನದ ಮುಂದೆ ಎಂಆರ್‌ಪಿಎಲ್ ಕಂಪನಿಗೆ ಸೇರಿದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ.
ಏನಾಯಿತು ಎಂದು ತಿಳಿಯುವಷ್ಟರಲ್ಲಿ ಸ್ಥಳೀಯರು ಭಯಭೀತರಾಗಿದ್ದು ಕೂಡಲೇ ಸ್ಥಳೀಯವಾಗಿ ನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ.
ಕಟೀಲು ರೂಟ್ ನಲ್ಲಿ ಚಲಿಸುವ ಓಎಂಪಿಎಲ್ ಕಂಪನಿಯ ಈ ಬಸ್ ಕಡೆಯ ನೌಕರನ್ನು ಬಿಟ್ಟು ವಾಪಸ್ಸಾಗುವ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದಾರೆಂದು ತಿಳಿದು ಬಂದಿದ್ದು ,ಬೆಂಕಿ ತಗಲಿದ ಕೂಡಲೇ ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಬಸ್ಸಿನಿಂದ ಜಿಗಿದು ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…