Featured

ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಬಸ್ಸು – Vishwanews24

ಕಟೀಲು ದೇವಸ್ಥಾನದ ಎದುರು ಹೊತ್ತಿ ಉರಿದ ಬಸ್ಸು

ಕಟೀಲು: ಕಟೀಲು ದೇವಸ್ಥಾನದ ಮುಂದೆ ಎಂಆರ್‌ಪಿಎಲ್ ಕಂಪನಿಗೆ ಸೇರಿದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ.

ಏನಾಯಿತು ಎಂದು ತಿಳಿಯುವಷ್ಟರಲ್ಲಿ ಸ್ಥಳೀಯರು ಭಯಭೀತರಾಗಿದ್ದು ಕೂಡಲೇ ಸ್ಥಳೀಯವಾಗಿ ನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ.

ಕಟೀಲು ರೂಟ್ ನಲ್ಲಿ ಚಲಿಸುವ ಓಎಂಪಿಎಲ್ ಕಂಪನಿಯ ಈ ಬಸ್ ಕಡೆಯ ನೌಕರನ್ನು ಬಿಟ್ಟು ವಾಪಸ್ಸಾಗುವ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದಾರೆಂದು ತಿಳಿದು ಬಂದಿದ್ದು ,ಬೆಂಕಿ ತಗಲಿದ ಕೂಡಲೇ ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಬಸ್ಸಿನಿಂದ ಜಿಗಿದು ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

44 minutes ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

1 hour ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

24 hours ago