ಉಡುಪಿ: ಜಿಲ್ಲೆಯ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿಯಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಸೋಗಿನಲ್ಲಿ ಬಂದು ವಯೋವೃದ್ಧ ದಂಪತಿಗಳನ್ನು ವಂಚಿಸಿದ ಘಟನೆ ಅ.೧೭ರಂದು ನಡೆದಿದ್ದೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಿವೃತ್ತ ಸಂಸ್ಕೃತ ಶಿಕ್ಷಕ ಮಾಲಾಡಿ ಗುರುರಾಜ್ ಭಟ್ (89) ಹಾಗೂ ಶಾಂತಮ್ಮ (82) ದಂಪತಿಯ ಮನೆಗೆ ಅ.17ರಂದು ಆಗಮಿಸಿದ ಬೆಡ್‌ಶೀಟ್ ವ್ಯಾಪಾರಿಗಳು ಈ ಕೃತ್ಯ ಎಸಗಿದ್ದಾರೆ.
ಬೆಈ ಸಂದರ್ಭ ಮನೆಯ ಮಾಲಿಕರು ಯಾವುದೇ ವಸ್ತುಗಳು ನಮಗೆ ಬೇಡವೆಂದರೂ ಕೇಳದೆ ನಾವು ಕಟೀಲು ದೇವಳದ ದುರ್ಗಾಪರಮೇಶ್ವರಿ ನೇಕಾರರ ಸಂಘದಿಂದ ಬಂದಿದ್ದು, ದೇವಸ್ಥಾನದ ಅಭಿವೃದ್ಧಿಗಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ ಇದರಲ್ಲಿ ನೀವು ಖರೀದಿಸುವ ಈ ಬೆಡ್ ಶೀಟ್‌ನಿಂದ ದೇವಳಕ್ಕೂ ಹಾಗೂ ಸಂಘಟನೆಗೂ ಸಹಾಯ ಮಾಡಿದಂತಾಗುತ್ತದೆ ಎಂದು ನಂಬಿಸಿ, ಮಾಲಿಕರನ್ನು ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು 1 ಸಾವಿರ ವಸ್ತುಗಳ ಖರೀದಿಗೆ, ಯಾವ ರಶೀದಿ ನೀಡದೇ 14 ಸಾವಿರ ಹಣ ಪಡೆದು ವಂಚಿಸಿ ಪರಾರಿಯಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…