ಕಟೀಲು: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಹಿಂಬದಿ ಸವಾರ ಬಾಲಕ ಮೃತಪಟ್ಟ ಘಟನೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ.
ಕಿಲ್ಲಂಜೆ ಶಾಲಾ ಸಮೀಪದ ನಿವಾಸಿ ಚರಣ್ (14) ಮೃತ ಬಾಲಕ. ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನವನ್ನು ಚರಣ್ ನಿಲ್ಲಿಸಿ ಲಿಫ್ಟ್ ಕೇಳಿದ್ದಾನೆ.
ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದಾಗ ಕಿನ್ನಿಗೋಳಿಯಿಂದ ಕಟೀಲು ಕಡೆಗೆ ಬರುತ್ತಿದ್ದ ಬಸ್ ಉಲ್ಲಂಜೆ ಜುಮಾದಿ ಗುಡ್ಡೆ ಬಳಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ದ್ವಿಚಕ್ರ ವಾಹನದ ಹಿಂಬದಿ ಕುಳಿತಿದ್ದ ಚರಣ್ ರಸ್ತೆಗೆ ಎಸೆಯಲ್ಪಟ್ಟು ಬಸ್ಸಿನಡಿಗೆ ಬಿದ್ದು ಮೃತಪಟ್ಟಿದ್ದಾನೆ. ಸವಾರ ಎಡ ಬದಿ ಬದಿಗೆ ಎಸೆಯಲ್ಪಟ್ಟ ಕಾರಣ ಬದುಕುಳಿದಿದ್ದಾರೆ. ಇಲ್ಲಿ ಸುಮಾರು ಒಂದು ಗಂಟೆ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಮೃತ ಬಾಲಕನ ತಂದೆ ಗಣೇಶ್ ಕಿನ್ನಿಗೋಳಿಯ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.ಬಾಲಕ ತಂದೆ, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾನೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…