Featured

ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ದರ್ಶನಕ್ಕೆ ಅವಕಾಶ -Vishwanews24

ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ದರ್ಶನಕ್ಕೆ ಅವಕಾಶ..

ಯಾವುದೇ ಸೇವೆಗಳಿಗೆ ಅವಕಾಶವಿರುವುದಿಲ್ಲ…

ವಾರಾಂತ್ಯ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣ ನಿರ್ಬಂಧ..

ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ನಿಷೇಧ

ಮಂಗಳೂರು : ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು, ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ.

ಅವುಗಳು ಇಂತಿವೆ:

1. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ದೇವರ ದರ್ಶನ, ತೀರ್ಥಪ್ರಸಾದ, ಅನ್ನಸಂತರ್ಪಣೆಗೆ ಮುಂದಿನ ಆದೇಶದವರೆಗೆ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಸೇವೆಗಳಿಗೆ ಅವಕಾಶವಿರುವುದಿಲ್ಲ.

2. ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.

3. ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತ್ಯಾ ಉತ್ಸವ / ಸೇವೆಗಳು ತೀರ್ಥ, ಪ್ರಸಾದ ಮುಡಿ ಸೇವೆ, ವಸತಿಗಳನ್ನುನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ.

4. ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ – 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳು, ಜಿಲ್ಲಾ ವಿಪ್ಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

8 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

9 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

9 hours ago