ಕಟೀಲು: ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ.
ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸುವುದು ಅನಿವಾರ‍್ಯವಾಗಿತ್ತು. ಪ್ರತೀ ವರ್ಷ ಮೇಳಗಳು ಆರು ತಿಂಗಳು ತಿರುಗಾಟ ನಡೆಸುತ್ತದೆ, ವರ್ಷಕ್ಕೆ ಸುಮಾರು 1,000 ಅಧಿಕ ಪ್ರದರ್ಶನ ನೀಡುತ್ತಿದ್ದು, ರಾತ್ರಿ 8.30ಕ್ಕೆ ಪೂರ್ವರಂಗ ಆರಂಭವಾದರೆ ರಾತ್ರಿ 10.30ಕ್ಕೆ ಪ್ರಸಂಗ ಪೀಠಿಕೆ ಆರಂಭವಾಗುತ್ತದೆ ಬೆಳಗ್ಗಿನ ಜಾವ ಸುಮಾರು 5.30ಕ್ಕೆ ಯಕ್ಷಗಾನ ಮುಗಿಯುತ್ತಿತ್ತು.
ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ವರೆಗೆ ಯಕ್ಷಗಾನ ಸೇವೆ ನಡೆಯಲಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನುವಂಶಿಕ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ, ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕರಾದ ವಾಸುದೇವ ಆಸ್ರಣ್ಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,
ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ದೇವರ ಒಪ್ಪಿಗೆ ಬಂದಿದೆ. ಹಾಗಾಗಿ ಕಾಲಮಿತಿ ಯಕ್ಷಗಾನ ಮಾಡುವ ಬಗ್ಗೆ ಮಂಗಳವಾರ ಆಡಳಿತ ಮಂಡಳಿ ನಿರ್ಧಾರ ಮಾಡಿದ್ದು, ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಇನ್ನು ಯಕ್ಷಗಾನ ಪ್ರದರ್ಶನದ ಸ್ವರೂಪ ಚಿಂತನೆಗಳ ಸ್ಪಷ್ಟ ರೂಪ ಮುಂದಿನ ದಿನಗಳಲ್ಲಿ ನಡೆಯುವ ಸಭೆಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…