ಕಟೀಲು: ಕಟೀಲು ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಬೆಳಗ್ಗೆ ವರೆಗೆ ನಡೆಸಲು ಹೈಕೋರ್ಟು ಅನು ಮತಿ ನೀಡಿದೆ. ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸ ಬೇಕು ಎಂದು ಸೂಚಿಸಿದೆ.
ಯಕ್ಷಗಾನ ನಡೆಸಲು ರಾತ್ರಿ 10ರ ವರೆಗೆ ಅನು ಮತಿಯಿದ್ದರೂ ಕಟೀಲು ಮೇಳ ವಿಶೇಷ ಪ್ರಕರಣವೆಂದು ಭಾವಿಸಿ ರಾತ್ರಿ 12.30ರ ವರೆಗೆ ಮಾತ್ರ ನಡೆಸಬೇಕು ಎಂದು ದ.ಕ. ಜಿಲ್ಲಾಧಿಕಾರಿ 2022ರ ನ.15ರಂದು ಎಂದು ಆದೇಶ ಹೊರಡಿಸಿದ್ದರು.
ಇದನ್ನು ಪ್ರಶ್ನಿಸಿ ದೇಗುಲದ ಭಕ್ತ ಕೃಷ್ಣಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದು ಕೋವಿಡ್ 19ರ ಪೂರ್ವದಲ್ಲಿ ಚಾಲ್ತಿಯಲ್ಲಿ ಇದ್ದಂತೆ ಯಕ್ಷಗಾನ ಪ್ರದರ್ಶನ ನೀಡಲು ಜಿಲ್ಲಾಧಿಕಾರಿ ಅಥವಾ ಸಮಕ್ಷ ಪ್ರಾಧಿಕಾರವು ಅನುಮತಿ ನೀಡಬೇಕು.
ಅರ್ಜಿದಾರರು ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮುಕ್ತವಾಗಿರುತ್ತಾರೆ ಎಂದು ಅದೇಶದಲ್ಲಿ ನ್ಯಾಯಮೂರ್ತಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…